ಮಿಚುಂಗ್ ಚಂಡಮಾರುತ ಎಫೆಕ್ಟ್: ಮತ್ತೆ ಮಳೆ!
– ರಾಜ್ಯದಲ್ಲೂ ಇನ್ನೆರಡು ದಿನ ಮಳೆ ಸಾಧ್ಯತೆ
– ಬೆಂಗಳೂರು ಸೇರಿ ಎಲ್ಲೆಡೆ ಮಳೆ ವಾತಾವರಣ
NAMMUR EXPRESS NEWS
ಬೆಂಗಳೂರು: ಮಿಚುಂಗ್ ಚಂಡಮಾರುತ ಎಫೆಕ್ಟ್ ಹಿನ್ನೆಲೆ ರಾಜ್ಯದಲ್ಲೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಕರಾವಳಿ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಬೆಂಗಳೂರಿನಲ್ಲಿ ಮುಂಜಾನೆ ವೇಳೆಗೆ ಮೋಡ ಕವಿದ ವಾತಾವರಣ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.
ದಕ್ಷಿಣ ಕನ್ನಡಸೇರಿ ಕರಾವಳಿ ಭಾಗದಲ್ಲಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.ಮಿಚುಂಗ್ ಚಂಡಮಾರುತ ಮೂರು ರಾಜ್ಯಗಳಿಗೆ ಕಟ್ಟೆಚ್ಚರ ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆ ಸಾಧ್ಯತೆ ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಬೀಸುತ್ತಿರುವ ಗಾಳಿ ಗಂಟೆಗೆ 100 – 130 ಕಿಮೀ ವೇಗದಲ್ಲಿ ಮಿಚುಂಗ್ ಚಂಡಮಾರುತ ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿದೆ.