ರಾಜ್ಯದ ರೈತರಿಗೆ ಗುಡ್ ನ್ಯೂಸ್..!
– ಮುಂದಿನ ವಾರ ಹೆಕ್ಟೇರ್ ಗೆ 22,500ವರೆಗೆ ಬೆಳೆ ಪರಿಹಾರ ಪಾವತಿ
NAMMUR EXPRESS NEWS
ಬೆಂಗಳೂರು: ರಾಜ್ಯ ಸರ್ಕಾರದಿಂದ ರೈತರ ಬೆಳೆಹಾನಿಗೆ ಪರಿಹಾರವನ್ನು ಘೋಷಣೆ ಮಾಡಿತ್ತು. ಅದರಂತೆ ಮುಂದಿನ ವಾರ ಹೆಕ್ಟೇರ್ ಗೆ 22,500ರವರೆಗೆ ಬೆಳೆಹಾನಿ ಪರಿಹಾರ ಪಾವತಿ ಮಾಡಲಾಗುತ್ತಿದೆ. ಈ ಕುರಿತಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಮಾಹಿತಿ ನೀಡಿದ್ದು, ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಎನ್ ಡಿ ಆರ್ ಎಫ್ ಅನುದಾನ ನಿರೀಕ್ಷಿಸಿ, ಬೆಳೆಹಾನಿ ಪರಿಹಾರದ ಮೊದಲ ಕಂತಾಗಿ ಅರ್ಹ ರೈತರಿಗೆ ತಲಾ 2,000 ಪಾವತಿಸಲು ತಿರ್ಮಾನಿಸಲಾಗಿದೆ. ಮುಂದಿನವಾರ ಆ ಹಣವನ್ನು ರೈತರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.
ಇನ್ನೂ ಶೇ.33ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರಣಕ್ಕೆ ಪ್ರತಿ ಹೆಕ್ಟೇರ್ ಗೆ ಪರಿಹಾರ ದರ ಕೂಡ ನಿಗದಿ ಪಡಿಸಲಾಗಿದೆ. ಮಳೆಯಾಶ್ರಿತ ಬೆಳೆಗಳಿಗೆ ಪ್ರತಿ ಹೆಕ್ಟೇರ್ ಗೆ ರೂ.8,500 ಪರಿಹಾರ ನೀಡಲಾಗುತ್ತದೆ. ನೀರಾವರಿ ಬೆಳೆಗೆ 17,000 ಹಾಗೂ ಬಹು ವಾರ್ಷಿಕ ಬೆಳೆಗೆ ರೂ.22,500ರವರೆಗೆ ಬೆಳೆ ಪರಿಹಾರ ನೀಡೋದಾಗಿ ತಿಳಿಸಿದರು. ಕೇಂದ್ರದಿಂದ ಅನುದಾನ ಬಂದ ಕೂಡಲೇ ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ಬರ ಪರಿಹಾರವನ್ನು ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.