ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ!
– ಹವಾಮಾನ ಇಲಾಖೆ ಮುನ್ಸೂಚನೆ
– ರೈತರಿಗೆ ಮಹತ್ವದ ಮಾಹಿತಿ: ಯಾವತ್ತು ಎಲ್ಲೆಲ್ಲಿ ಮಳೆ?
NAMMUR EXPRESS NEWS
ರಾಜ್ಯದಲ್ಲಿ ಮೂರು ದಿನ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ ಹವಾಮಾನ ಇಲಾಖೆ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮುಂದಿನ ಮೂರು ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ ಮತ್ತು ರಾಮನಗರದಲ್ಲಿ ಡಿ.10ರಿಂದ ಡಿ.12ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಇನ್ನೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಮುಂದಿನ 2-3 ದಿನಗಳಲ್ಲಿ ಮತ್ತೊಂದು ಚಂಡಮಾರುತ ಉಂಟಾಗುವ ಸಾಧ್ಯತೆ ಇದ್ದು, ಕೇರಳ, ತಮಿಳುನಾಡಿನಲ್ಲಿ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಬಹುತೇಕ ಕಡೆ ಕೃಷಿ ಚಟುವಟಿಕೆ ಗರಿಗೆದರಿದ್ದು ಮಳೆ ಅತಂಕ ಸೃಷ್ಟಿ ಮಾಡಿದೆ.