ಕಾಪುವಿನ ಸಮಾಜ ಸೇವಕ ಕುಟುಂಬ ಆತ್ಮಹತ್ಯೆ!
– ಲೀಲಾಧರ ಶೆಟ್ಟಿ, ಪತ್ನಿ ವಸುಂಧರಾ ಶೆಟ್ಟಿ ಆತ್ಮಹತ್ಯೆ
– ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ
– ಕುಂದಾಪುರ: ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
NAMMUR EXPRESS NEWS
ರಂಗಕರ್ಮಿ, ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಶರಣಾದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಲೀಲಾಧರ ಶೆಟ್ಟಿಯವರು ಜಿಲ್ಲಾ ಕಬಡ್ಡಿ ಸಂಸ್ಥೆಯ ಉಪಾಧ್ಯಕ್ಷರು ಹಾಗೂ ಅತ್ಯಂತ ಸಮಾಜಮುಖಿ ಕಾರ್ಯ ನಿರ್ವಹಿಸಿದ ಸಮಾಜಸೇವಕರೂ ಆಗಿದ್ದರು.
ವಿಶೇಷವಾಗಿ ರಂಗಕರ್ಮಿಯು ಆಗಿ ಕಳೆದ ಹಲವಾರು ವರ್ಷಗಳಿಂದ “ರಂಗಿತರಂಗ” ನಾಟಕ ತಂಡವನ್ನು ಮುನ್ನಡೆಸಿ ನಾಟಕ ನಿರ್ದೇಶನ, ನಟರಾಗಿ ಕೂಡಾ ಜನಾನುರಾಯಿಯಾಗಿದ್ದರು. ಇವರ ಅಂತಿಮ ದರ್ಶನ ಬುಧವಾರ ಸಂಜೆ ನಾಲ್ಕು ಗಂಟೆಗೆ ಕಾಪು ಮಜೂರು ಕರಂದಾಡಿ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಕುಂದಾಪುರ: ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ
ಕುಂದಾಪುರ: ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುತ್ತಿದ್ದ ಆರೋಪದಡಿ ಬೇಳೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪಿಡಿಓ ಜಯಂತ್ ಬಂಧಿತ ಆರೋಪಿ. ಬಸವ ವಸತಿ ಯೋಜನೆಯಲ್ಲಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಒಟ್ಟು 4 ಕಂತಿನಲ್ಲಿ 1.20 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಬಿಡುಗಡೆಯಾದ ಈ ಹಣದಲ್ಲಿ ಅರ್ಧಾಂಶ ಹಣ ಮಂಜೂರು ಮಾಡಿಸಲು 10 ಸಾವಿರ ಹಣ ಖರ್ಚಾಗಿದೆ.
ಆ ಹಣವನ್ನು ಮರಳಿ ನೀಡುವಂತೆ ಆರೋಪಿ ಲಂಚ ಬೇಡಿಕೆಯನ್ನು ಇಟ್ಟಿದ್ದನು. ಇನ್ನು ಆ ಬಳಿಕ ಆರೋಪಿ ಲಂಚ ಬೇಡಿಕೆ ಇಟ್ಟ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅದರಂತೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿಯು ತೆಕ್ಕಟ್ಟೆ ಜಂಕ್ಷನ್ನಲ್ಲಿ ದೂರುದಾರರಿಂದ 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ