ಭಾರತಿ ವಿಷ್ಣುವರ್ಧನ್ ಆರೋಗ್ಯದಲ್ಲಿ ಏರುಪೇರು!
– ಊಟ ಮಾಡದೇ ಹಾಸಿಗೆ ಹಿಡಿದ ಖ್ಯಾತ ನಟಿ
– ಲೀಲಾವತಿ ನಿಧನ ಬಳಿಕ ಮತ್ತೊಂದು ಶಾಕಿಂಗ್ ಸುದ್ದಿ
NAMMUR EXPRESS NEWS
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ ಹಾಗೂ ಹಿರಿಯ ನಟಿ ಭಾರತಿ ಆರೋಗ್ಯ ವಿಷಯ ಸ್ಯಾಂಡಲ್ವುಡ್ನಲ್ಲಿ ಆತಂಕ ಉಂಟು ಮಾಡಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಬಗ್ಗೆ ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ. ಸುದ್ದಿ ಕೇಳಿ ಚಿತ್ರರಂಗ ಮತ್ತು ಕನ್ನಡಿಗರು ಆತಂಕಕ್ಕೆ ಒಳಗಾಗಿದ್ದಾರೆ. ಹಿರಿಯ ನಟಿ ಲೀಲಾವತಿ ಅವರು ನಮ್ಮನ್ನಗಲಿ ಇನ್ನು ನಾಲ್ಕು ದಿನಗಳು ಆಗಿಲ್ಲ. ಇಂತಹ ಸಮಯದಲ್ಲೇ ಮತ್ತೊಬ್ಬ ಹಿರಿಯ ನಟಿಯ ಅನಾರೋಗ್ಯ ಸುದ್ದಿ ಈಗ ಆತಂಕಕ್ಕೆ ತಳ್ಳಿದೆ.
ಹಿಂದಿ, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಹಾಸಿಗೆ ಹಿಡಿದಿದ್ದಾರೆ ಎಂದು ಅನಿರುದ್ದ್ ಮಾಹಿತಿ ನೀಡಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ. ಸರಿಯಾಗಿ ಊಟ ಮಾಡಲು ಆಗುತ್ತಿಲ್ಲ. ತುಂಬಾ ನಿಶಕ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ನಟಿ ಭಾರತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಹೊರಗಡೆ ಎಲ್ಲೂ ಹೋಗದೆ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಕನ್ನಡಿಗರ ಹಾರೈಕೆಯಿಂದ ಬೇಗ ಗುಣ ಮುಖರಾಗುತ್ತಾರೆ ಎನ್ನುವ ನಂಬಿಕೆ ನಮಗಿದೆ ಎಂದು ಅನಿರುದ್ಧ ವಿಶ್ವಾಸ ವ್ಯಕ್ತಪಡಿಸಿದ್ದಾರೆ.