ಬಗರ್ ಹುಕುಂ ಅಕ್ರಮ ಸಕ್ರಮ ಭಾಗ್ಯ!
– ಅರ್ಜಿ ವಿಲೇವಾರಿಗೆ ಬಂದಿದೆ ಆಪ್
– ಈ ಆ್ಯಪ್ ಕೆಲಸ ಹೇಗೆ? ಏನೇನು ದಾಖಲೆ ಬೇಕು?
NAMMUR EXPRESS NEWS
ಬಗರ್ ಹುಕುಂ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಕೃಷಿ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ. ಈ ಆಪ್ ಮೂಲಕ ಲಕ್ಷಾಂತರ ರೈತರ ಸಮಸ್ಯೆ ಬಗೆಹರಿಯಲಿದೆ. ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ಹೋಗಿ ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ತಂತ್ರಾಂಶ ಬಳಸಿ ಅರ್ಜಿ ವಿಲೇ ಮಾಡಲಾಗುತ್ತದೆ ಎಂದು ಆ್ಯಪ್ ಬಿಡುಗಡೆ ಮಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದಾರೆ.
ಕಂದಾಯ ಗ್ರಾಮ ಘೋಷಿಸಿ ಹಕ್ಕುಪತ್ರ ನೀಡಿ:
ಬಡವರಿಗೆ ಸಹಾಯಮಾಡುವ ನಿಟ್ಟಿನಲ್ಲಿ ಅರ್ಹ ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಿ ಹಕ್ಕುಪತ್ರ ವಿತರಿಸಿ ಎಂದು ತಾಕೀತು ಮಾಡಿದರು. ಈಗಾಗಲೆ ಗುರುತಿಸಲಾಗಿರುವ ಕೆಲವು ಗ್ರಾಮಗಳನ್ನು ಕೈಬಿಡುವ ಬಗ್ಗೆ ಕೆಲವು ಅಧಿಕಾರಿಗಳು ಪ್ರಸ್ತಾವನೆ ಕಳುಹಿಸಿದ್ದೀರಿ. ಅಸಲಿಗೆ ಅರಣ್ಯ ಪ್ರದೇಶ ಅಥವಾ ಕೆರೆ ಜಾಗಗಳನ್ನು ಕಂದಾಯ ಗ್ರಾಮಗಳ ಪಟ್ಟಿಯಿಂದ ಕೈಬಿಡುವ ಬಗ್ಗೆ ತಕರಾರಿಲ್ಲ. ಆದರೆ, ಕೆಲವು ಅಸಂಬದ್ಧ ತಕರಾರುಗಳ ಕಾರಣಕ್ಕೆ ಕಂದಾಯ ಗ್ರಾಮಗಳನ್ನು ಕೈಬಿಡಬೇಡಿ ಎಂದರು.