ಕಾಫಿನಾಡಿನಲ್ಲೂ ಕರೋನಾ ಆತಂಕ..!
-ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರಿಗೆ ಕರೋನಾ ಪಾಸಿಟಿವ್
– ಹೆಚ್ಚುತ್ತಿರುವ ಕರೋನಾ ಪ್ರಕರಣಕ್ಕೆ ಎಚ್ಚೆತ್ತ ಸರ್ಕಾರ
NAMMUR EXPRESS NEWS
ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ಕರೋನಾ ಆತಂಕ ಮನೆ ಮಾಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲೂ ಇಬ್ಬರಿಗೆ ಕೋವಿಡ್ ಪಾಸಿಟಿವ್ ಧೃಡವಾಗಿದೆ. ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿಕೊಂಡ ಇಬ್ಬರಿಗೆ ಕರೋನಾ ಪಾಸಿಟಿವ್ ಕಂಡುಬಂದಿದ್ದು, ಮತ್ತೊಮ್ಮೆ ಇಬ್ಬರ ಕೋವಿಡ್ ಟೆಸ್ಟ್ ಗಾಗಿ ಅಧಿಕಾರಿಗಳು ಸ್ಯಾಂಪಲ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಜಿಲ್ಲಾಡಳಿತದ ಸಿದ್ಧತೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ಎಚ್ಚೆತ್ತಿರುವ ಸರ್ಕಾರ ಜಿಲ್ಲಾ ಆರೋಗ್ಯ ಇಲಾಖೆ ಎಲ್ಲಾ ಸಿದ್ದತೆ ನಡೆಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಿ.ಎಚ್ ಒ ಡಾ. ಅಶ್ವಥ್ ಬಾಬು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಹರಡದಂತೆ ನಿಗಾ ವಹಿಸುವುದು, ಅಲ್ಲದೇ ಖಾಸಗಿ ಆಸ್ಪತ್ರೆಗಳಿಗೂ ಸಹಾ ಇಲಾಖೆಯ ಸೂಚನೆಗಳನ್ನು ಅನುಸರಿಸಲು ಸೂಚನೆ ಹಾಗೂ ಮಾರ್ಗಸೂಚಿ ಪಟ್ಟಿ ನೀಡಲಾಗುವುದು ಎಂದರು. 60 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯ ಮಾಸ್ಕ್ ಧರಿಸಲು ಆದೇಶ ಬಂದಿದ್ದು, ಐಎಲ್ ಐ, ಸಾರಿ ಕೇಸ್ ಗಳ ತಪಾಸಣೆ ಜೊತೆಗೆ ಜ್ವರ ಹಾಗೂ ಆರೋಗ್ಯ ಸಮಸ್ಯೆಗಳ ಪ್ರಕರಣಗಳ ಕುರಿತು ಆಸ್ಪತ್ರೆಗಳಲ್ಲಿ ನಡೆಸಿರುವ ಸಿದ್ದತೆ ಬಗ್ಗೆ ತಿಳಿಸಿದರು. ಇನ್ನು ಜಿಲ್ಲೆಗೆ ಹೊರ ರಾಜ್ಯದಿಂದ ಬರುವ ಪ್ರವಾಸಿಗರನ್ನು ನಿರ್ಬಂಧಿಸುವ ಯಾವುದೇ ಆದೇಶ ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಿಲ್ಲ