ಮಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಪ್ರಕರಣ!
– ಎಫ್ ಐ ಆರ್ ದಾಖಲು!
NAMMUR EXPRESS NEWS
ಮಂಗಳೂರು: ಮಂಗಳೂರು ಏರ್ಪೋರ್ಟ್ ನಲ್ಲಿ ಬಾಂಬ್ ಇಟ್ಟಿರುವುದಾಗಿ [email protected] ಮೇಲ್ ಐಡಿಯಿಂದ ಡಿಸೆಂಬರ್ 26ರಂದು FUNING ಎಂಬ ಉಗ್ರಗಾಮಿ ಸಂಘಟನೆ ಎಂದು ಘೋಷಿಸಿಕೊಂಡು, ಬೆದರಿಕೆ ಸಂದೇಶ ಬಂದಿತ್ತು. ಈ ಸಂಬಂಧ ಅದಾನಿ ಆಡಳಿತದ ಮಂಗಳೂರು ಏರ್ಪೋರ್ಟ್ ಸಂಸ್ಥೆ ಬಾಜ್ಪೆ ಠಾಣೆಗೆ ದೂರು ನೀಡಿತ್ತು. ಮಂಗಳೂರು ಏರ್ಪೋರ್ಟ್ ಆಡಳಿತ ಮಂಡಳಿ ಡಿಸೆಂಬರ್.27 ರಂದು ಇ-ಮೇಲ್ ಗಮನಿಸಿ ಅಲರ್ಟ್ ಆಗಿದ್ದು, ಭದ್ರತಾ ತಂಡ ಏರ್ಪೋರ್ಟ್ ನಲ್ಲಿ ತೀವ್ರ ತಪಾಸಣೆ ನಡೆಸಿತ್ತು.
ಅಲ್ಲದೇ ಸಿಐಎಸ್ಎಫ್ ಹಾಗೂ ಬಾಜ್ಪೆ ಪೊಲೀಸರು ಸಹ ತೀವ್ರ ಶೋಧ ನಡೆಸಿದ್ದರು. ಕೊನೆಗೆ ಇದೊಂದು ಹುಸಿ ಬಾಂಬ್ ಕರೆ ಎಂದು ಖಾತ್ರಿಯಾಗಿತ್ತು. ಬಳಿಕ ಮಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಈ ಬಗ್ಗೆ ಬಾಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿತ್ತು. ಇದೀಗ ನ್ಯಾಯಾಲಯದ ಅನುಮತಿಯಿಂದ ಐಪಿಸಿ 507 ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.