ಮಹರ್ಷಿ ವಾಲ್ಮೀಕಿ ಇಂಟರ್ನ್ಯಾಷನಲ್ ವಿಮಾನ ನಿಲ್ದಾಣದ ಉದ್ಘಾಟನೆ
– ವಂದೇ ಮಾತರಂ ರೈಲುಗಳ ಸಂಚಾರಕ್ಕೆ ಚಾಲನೆ!
NAMMUR EXPRESS NEWS
ನವದೆಹಲಿ: ಡಿಸೆಂಬರ್ 30ರ ಶನಿವಾರ, ಐತಿಹಾಸಿಕ ಹಿನ್ನೆಲೆಯ ಧಾರ್ಮಿಕ ಕ್ಷೇತ್ರ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನಲೆಯಲ್ಲಿ ಅದಕ್ಕೂ ಮೊದಲು ಅಯೋಧ್ಯೆಗೆ ಸುಲಭ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಾಲ್ಮೀಕಿ ಇಂಟರ್ನ್ಯಾಷನಲ್ ಏರ್ಪೋರ್ಟ್ ನ ಉದ್ಘಾಟನೆಯನ್ನು ಅಯೋಧ್ಯ ಧಾಮದಲ್ಲಿ ಇಂದು ನೆರವೇರಿಸಲಿದ್ದಾರೆ. ಆಧುನಿಕ ತಂತ್ರಜ್ಞಾನದ ಜೊತೆಗೆ ಭಾರತೀಯ ಪರಂಪರೆಯನ್ನು ಹೊದ್ದು ನಿಂತ ವಿಮಾನ ನಿಲ್ದಾಣವನ್ನು ನೋಡುವುದೇ ಆನಂದವಾಗಿದೆ. ಇದೇ ಡಿ.30 ರ ಈ ದಿನ ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಗಳೂರು ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ.
ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿದೆ. ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ. ದೆಹಲಿಯಿಂದ ಕತ್ರಾ, ದೆಹಲಿಯಿಂದ ಲಕ್ನೋ ಮೂಲಕ ಅಯೋಧ್ಯೆ, ದೆಹಲಿಯಿಂದ ಚಂಡೀಗಢ ಮಾರ್ಗವಾಗಿ ಸಾಗಲಿದೆ. *ಬೆಂಗಳೂರು – ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ಗಳಿಗೂ ಡಿಸೆಂಬರ್ 30ರಂದು ಚಾಲನೆ ದೊರೆಯಲಿದೆ. ಬೆಂಗಳೂರು – ಕೊಯಮತ್ತೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಹ ಇತ್ತೀಚೆಗೆ ಯಶಸ್ವಿ ಪ್ರಾಯೋಗಿಕ ಸಂಚಾರ ನಡೆಸಿತ್ತು.