ಸುಳ್ಳು ಮಾಹಿತಿಯ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್:
– 18 ಸಾವಿರಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದು!
– 77 ಲಕ್ಷ ರೂ.ದಂಡ!
NAMMUR EXPRESS NEWS
ಶಿವಮೊಗ್ಗ: ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶಾಕ್ ನೀಡಿದ್ದು, ಕಳೆದ ನಾಲ್ಕು ವರ್ಷದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 18,152 ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. 77.9 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸರ್ಕಾರಿ ನೌಕರರು, ನಾಲ್ಕು ಚಕ್ರದ ವಾಹನ ಹೊಂದಿದವರು, ತೆರಿಗೆ ಪಾವತಿದಾರರು ಕೂಡ ಬಿಪಿಎಲ್ ಕಾರ್ಡ್ ಪಡೆದಿರುವುದು ಗೊತ್ತಾಗಿದೆ. ಅರ್ಹತೆ ಇಲ್ಲದಿದ್ದರೂ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಲ್ಲಿ ವಾಪಸ್ ನೀಡುವಂತೆ ಆಹಾರ ಇಲಾಖೆ ಹಿಂದಿನಿಂದಲೂ ಮಾಹಿತಿ ನೀಡಿದೆ. ಆದರೂ, ಸಾವಿರಾರು ಅನರ್ಹರು ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇಂಥವರನ್ನು ಪತ್ತೆ ಹಚ್ಚಿ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ. ಕಳೆದ 4 ವರ್ಷದಲ್ಲಿ 18 ಸಾವಿರಕ್ಕೂ ಅಧಿಕ ಕಾರ್ಡುಗಳನ್ನು ರದ್ದು ಮಾಡಿ 77 ಲಕ್ಷ ರೂಪಾಯಿ ಯಷ್ಟು ದಂಡ ವಿಧಿಸಲಾಗಿದೆ.