ಮಂಗನ ಕಾಯಿಲೆಗೆ ಒಂದು ಬಲಿ
– ಹೊಸನಗರ ತಾಲೂಕಿನ ಯುವತಿ ಮರಣ!
– ಜಿಲ್ಲೆಯಾದ್ಯಂತ ಮಂಗನ ಕಾಯಿಲೆ ಹಾವಳಿ! ಹುಷಾರ್!
ಹೊಸನಗರ : ಹೆಚ್ಚುತ್ತಿರುವ ಕೊರೋನಾ ಹಾವಳಿಯ ನಡುವೆ ಅಲ್ಲಲ್ಲಿ ಮಂಗನ ಕಾಯಿಲೆಯೂ ಶುರುವಾಗಿ ಜನ ಕಂಗಾಲಾಗುವಂತಾಗಿದೆ. ಇದೀಗ ಈ ಕಾಯಿಲೆಗೆ ಹೊಸನಗರ ತಾಲೂಕಿನ 18 ವರ್ಷದ ಯುವತಿ ಬಲಿಯಾಗಿದ್ದಾಳೆ. ತಾಲೂಕಿನ ಅರಮನೆಕೊಪ್ಪದ ಗ್ರಾಮದ ವ್ಯಾಪ್ತಿಯ ಯುವತಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಕೆಎಫ್ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿತ್ತು. ಮೂರು ದಿನಗಳ ಕಾಲ ಮೆಗ್ಗಾನ್ ಆಸ್ಪತ್ರೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾಳೆ.
ಇದುವರೆಗೂ ಮೂರು ಕೆ ಎಫ್ ಡಿ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಹೊಸನಗರ ತಾಲೂಕಿನಲ್ಲಿ ಈ ವರ್ಷದ ಮೊದಲ ಪ್ರಕರಣ ಇದಾಗಿದ್ದು, ಅರಮನೆಕೊಪ್ಪ ವ್ಯಾಪ್ತಿಯಲ್ಲಿ ಈ ಹಿಂದೆ ಕೆಎಫ್ಡಿ ಪ್ರಕರಣಗಳು ವರದಿಯಾಗಿಲ್ಲ. ಈ ಬಾರಿ ಶರಾವತಿ ಹಿನ್ನೀರು ತಗ್ಗಿದ ಹಿನ್ನೆಲೆ ಪ್ರಾಣಿಗಳ ಮೂಲಕ ವೈರಸ್ಗಳು ವರ್ಗಾವಣೆಯಾಗಿರಬಹುದು ಎನ್ನಲಾಗುತ್ತಿದೆ. ಈ ಮೂಲಕ ಜಿಲ್ಲೆಯ ಜನತೆ ಜಾಗೃತರಾಗಿರುವಂತೆ ಕೋರಲಾಗಿದೆ.