ಉಡುಪಿ -ಚಿಕ್ಕಮಗಳೂರು ಬಿಡಲ್ಲ ಎಂದ ಶೋಭಾ!
– ಲೋಕಸಭಾ ಚುನಾವಣೆಗೆ ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ
– ಹೈಕಮಾಂಡಿಗೆ ತಲೆ ನೋವಾಗುತ್ತಾ ಈ ಕ್ಷೇತ್ರ?!
NAMMUR EXPRESS NEWS
ತುಮಕೂರು/ಚಿಕ್ಕಮಗಳೂರು: ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ ಎಂದು ಶೋಭಾ ಕರಂದ್ಲಾಜೆ ಅವರು ಸ್ಪಷ್ಟೀಕರಣ ನೀಡಿದ್ದಾರೆ. ಈ ಮೂಲಕ ಉಡುಪಿ ಚಿಕ್ಕಮಗಳೂರು ಕಣ ರಂಗೇರಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ಇಲ್ಲಿಗೆ ಬಂದು ಸ್ಪರ್ಧೆ ಮಾಡುವುದಿಲ್ಲ. ಕಳೆದ ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಆಯ್ಕೆ ಆಗಿದ್ದು, ಈ ಬಾರಿಯೂ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಮೂಲಕ ಅನೇಕ ಆಕಾಂಕ್ಷಿಗಳಿಗೆ ಬಿಸಿ ತುಪ್ಪವಾಗಿದೆ.
ಯಾರು ಯಾರು ಸ್ಪರ್ಧೆಯಲ್ಲಿ?
ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂ ಬಿಜೆಪಿ ಪಕ್ಷದಿಂದ ಶೋಭಾ ಜತೆಗೆ ಸಿಟಿ ರವಿ, ಪ್ರಮೋದ್ ಮದ್ವರಾಜ್, ಜೀವರಾಜ್, ಜಯಪ್ರಕಾಶ್ ಹೆಗ್ಡೆ ಹೆಸರು ಚಾಲ್ತಿಯಲ್ಲಿದೆ.