26 ಕಾಡಾನೆಗಳಿಗೆ ನೂರಕ್ಕೂ ಹೆಚ್ಚು ಸಿಬ್ಬಂದಿ ಕಾವಲು!
– ಚಿಕ್ಕಮಗಳೂರು ನಗರ ಸಮೀಪವೇ ಆನೆಗಳ ಓಡಾಟ
– ಕಾಫಿ, ಅಡಿಕೆ ಮರೆತ ಕೇಂದ್ರ ಬಜೆಟ್: ಅಸಮಾಧಾನ
– ಮೂಡಿಗೆರೆ, ಚಿಕ್ಕಮಗಳೂರಿಗೆ ಬಂದ್ರು ತಹಸೀಲ್ದಾರ್
NAMMUR EXPRESS NEWS
ಚಿಕ್ಕಮಗಳೂರು: ಚಿಕ್ಕಮಗಳೂರು ಬಳಿ 26 ಕಾಡಾನೆ ಕಾಯಲು ಸುಮಾರು ನೂರಕ್ಕೂ ಹೆಚ್ಚು ಸಿಬ್ಬಂದಿ ನೇಮಕ ಮಾಡಲಾಗಿದೆ.ದುಂಗೆರೆ, ವಸ್ತಾರೆ, ಕೆಸುವಿನ ಮನೆ, ಮಾರಿಕಟ್ಟೆ ಗ್ರಾಮಗಳ ಸುತ್ತಮುತ್ತಲ ನೆಡುತೋಪಿಗೆ ಬಂದಿವೆ. ರೇಡಿಯೊ ಕಾಲರ್ ಅಳವಡಿಕೆಯಾಗಿರುವ ‘ಬೀಟಮ್ಮ’ ಎಂಬ ಹೆಣ್ಣಾನೆಯ ಹೆಜ್ಜೆಯನ್ನು ಉಳಿದ 25 ಆನೆಗಳು ಹಿಂಬಾಲಿಸುತ್ತಿವೆ. ಸಲಗ ‘ಭೀಮ’ ಸೇರಿ ನಾಲ್ಕು ಗಂಡಾನೆಗಳು ಇಡೀ ಗುಂಪನ್ನು ರಕ್ಷಣೆ ಮಾಡುತ್ತಿವೆ. ಭೀಮ ಆನೆ ಮದದಲ್ಲಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆಯಿಂದ ಆನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯ ಮಾಡುತ್ತಿದ್ದಾರೆ. ಆನೆಗಳ ಹಿಂಡಿರುವ ಜಾಗಕ್ಕೆ ಸಾರ್ವಜನಿಕರು ಹೋಗದಂತೆ ಸುತ್ತಲೂ ಕಾವಲಿದ್ದಾರೆ. ಅವುಗಳ ಚಲನ-ವಲನದ ಮೇಲೆ ಸಂಪೂರ್ಣ ನಿಗಾ ವಹಿಸಿದ್ದಾರೆ. ನಗರದ ಕಡೆಗೆ ಬಂದರೆ ಮಾತ್ರ ಸಾಕಾನೆಗಳನ್ನು ಬಳಸಿಕೊಂಡು ಹಿಮ್ಮೆಟ್ಟಿಸಲು ನಿರ್ಧರಿಸಿದ್ದಾರೆ.
ಅದರ ಹೊರತಾಗಿ ದೊಡ್ಡ ಸಂಖ್ಯೆಯಲ್ಲಿರುವ ಕಾಡಾನೆಗಳನ್ನು ಬೆದರಿಸಿದರೆ ಅಪಾಯವೇ ಹೆಚ್ಚು ಎಂಬುದನ್ನು ಅಧಿಕಾರಿಗಳು ಅರಿತಿದ್ದಾರೆ. ಎಲ್ಲವೂ ಒಟ್ಟಿಗೆ ಇರುವುದರಿಂದ ಆನೆಗಳು ತಮ್ಮ ಪಾಡಿಗೆ ಪ್ರತಿರಾತ್ರಿ ಒಂದೆಡೆಯಿಂದ ಮತ್ತೊಂಡೆಗೆ ಸಾಗುತ್ತಿವೆ. ಅವು ಮತ್ತೆ ಹಾಸನ ಜಿಲ್ಲೆಯ ಬೇಲೂರು ಕಡೆಗೆ ಹೋಗುವಂತೆ ಕಾಣಿಸುತ್ತಿಲ್ಲ. ಆಲ್ಲೂರು ಭಾಗಕ್ಕೆ ಮುಖ ಮಾಡಿದಂತಿದೆ. ಗರ್ಭಿಣಿ ಆನೆಗಳು, ಮರಿಗಳು ಇರುವುದರಿಂದ ಸಾಗುವ ದಾರಿಯ ಗುರಿಯನ್ನು ಅವು ಹೊಂದಿವೆ. ದಾರಿಯಲ್ಲಿ ಜನರಿಗೆ ಯಾವುದೇ ತೊಂದರೆ ಆಗದಂತೆ ನಿಗಾ ವಹಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳುತ್ತಾರೆ. 26 ಆನೆಗಳು ಒಟ್ಟಿಗೆ ಇರುವುದರಿಂದ ಯಾವ ಆನೆಯನ್ನು ಹಿಡಿದು ಸ್ಥಳಾಂತರ ಮಾಡುವ ಸಾಹಸಕ್ಕೆ ಕೈ ಹಾಕುವುದಿಲ್ಲ. ಹಾಗೆ ಮಾಡಿದರೆ ಆನೆಗಳು ಗಾಬರಿಗೊಳ್ಳುತ್ತವೆ. ಅದರಿಂದ ತೊಂದರೆಯೇ ಹೆಚ್ಚು. ಸದ್ಯಕ್ಕೆ ಅವುಗಳನ್ನು ಕಾಡಿನ ಕಡೆಗೆ ಸಾಗಿಸುವುದಷ್ಟೇ ಗುರಿ’ ಎಂದು ಸ್ಪಷ್ಟಪಡಿಸಿದರು.
ಕಾಫಿ, ಅಡಿಕೆ ಮರೆತ ಕೇಂದ್ರ ಬಜೆಟ್
ಚಿಕ್ಕಮಗಳೂರು: ಹವಾಮಾನ ವೈಪರಿತ್ಯ, ಕಾರ್ಮಿಕರಕೊರತೆಯಿಂದ ಕಂಗೆಟ್ಟು ಕೇಂದ್ರ ಬಜೆಟ್ ಮೇಲೆ ಅಪಾರ ನಿರೀಕ್ಷೆ ಹೊಂದಿದ್ದ ಕಾಫಿ ಮತ್ತು ಅಡಿಕೆ ಬೆಳೆಗಾರರಿಗೆ ನಿರಾಸೆ ಉಂಟಾಗಿದೆ. ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಕಾಫಿ ದೇಶಕ್ಕೆ ಹೆಚ್ಚಾಗಿ ವಿದೇಶಿ ವಿನಿಮಯ ತಂದುಕೊಡುವ ಉದ್ಯಮವಾಗಿದೆ. ಕಾಫಿ ಹಲವು ವರ್ಷಗಳಿಂದ ಹವಾಮಾನ ವೈಪರಿತ್ಯ, ಕಾರ್ಮಿಕರ ಕೊರತೆ ಸೇರಿ ಹಲವು ಸಮಸ್ಯೆಗಳಿಂದ ನಲುಗಿದೆ. ಸಮಸ್ಯೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಾಫಿ ಮಂಡಳಿ ಮೂಲಕ ಬೆಳೆಗಾರರು ಸಲ್ಲಿಸಿದ್ದರು.ಸರ್ಫೇಸಿ ಕಾಯ್ದೆ ಮುಂದಿಟ್ಟುಕೊಂಡು ಬ್ಯಾಂಕ್ ಅಧಿಕಾರಿಗಳು ಬೆಳೆಗಾರರ ಮೇಲೆ ಸವಾರಿ ಮಾಡಲು ಹೊರಟಿದ್ದಾರೆ. ಸಾಲ ಮರುಪಾವತಿಸದ ಬೆಳೆಗಾರರ ತೋಟಗಳನ್ನು ಹರಾಜು ಮಾಡುತ್ತಿದ್ದಾರೆ. ಈ ಕಾಯ್ದೆಯಿಂದ ಕಾಫಿ ಉದ್ಯಮವನ್ನು ಹೊರಗಿಡಬೇಕು ಎಂಬುದು ಕಾಫಿ ಬೆಳೆಗಾರರ ಪ್ರಮುಖ ಬೇಡಿಕೆ.
ಬ್ಯಾಂಕ್ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಬೆಳೆ ವೈಫಲ್ಯದಿಂದ ಕಂಗೆಟ್ಟಿರುವ ಬೆಳೆಗಾರರು ಮತ್ತಷ್ಟು ಕಷ್ಟಕ್ಕೆ ಸಿಲುಕಲಿದ್ದಾರೆ ಎಂಬುದನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿದ್ದರು. ಹವಾಮಾನ ವೈಪರಿತ್ಯದಿಂದ ಫಸಲು ಕೈಸೇರದಂತಾಗಿದೆ. ಬೆಲೆ ಇದ್ದರೂ ಬೆಳೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹವಾಮಾನ ಆಧರಿತ ವಿಮೆ ವ್ಯಾಪ್ತಿಗೆ ಕಾಫಿಯನ್ನೂ ಸೇರಿಸಬೇಕು ಎಂಬುದು ಬೆಳೆಗಾರರ ಮನವಿ. ಈ ಎಲ್ಲಾ ಬೇಡಿಕೆಗಳನ್ನು ಕೇಂದ್ರ ವಾಣಿಜ್ಯ ಸಚಿವಾಲಯಕ್ಕೆ ಬೆಳೆಗಾರರು ಸಲ್ಲಿಸಿದ್ದರು. ಆದರೆ, ಕೇಂದ್ರ ಬಜೆಟ್ನಲ್ಲಿ ಕಾಫಿ ಬೆಳೆಯ ಬಗ್ಗೆ ಪ್ರಸ್ತಾಪವೇ ಇಲ್ಲದಿರುವುದು ಬೆಳೆಗಾರರನ್ನು ನಿರಾಸೆಗೆ ದೂಡಿದೆ.ರೋಗ ಬಾಧೆಯಿಂದ ನರಳುತ್ತಿರುವ ಅಡಿಕೆ ಬೆಳೆಗಾರರು ಕೇಂದ್ರ ಸರ್ಕಾರದಿಂದ ಪ್ಯಾಕೇಜ್ ನೀರೀಕ್ಷೆ ಮಾಡಿದ್ದರು. ಕೇಂದ್ರದ ತಂಡಕ್ಕೂ ಮನವಿ ಸಲ್ಲಿಸಿದ್ದರು. ಈ ಬಗ್ಗೆಯೂ ಬಜೆಟ್ನಲ್ಲಿ ಪ್ರಸ್ತಪ ಇಲ್ಲದಿರುವುದು ಬೇಸರ ಮೂಡಿಸಿದೆ ಎನ್ನುತ್ತಾರೆ ರೈತರು.
ಮೂಡಿಗೆರೆ, ಚಿಕ್ಕಮಗಳೂರಿಗೆ ಬಂದ್ರು ತಹಸೀಲ್ದಾರ್
ಚಿಕ್ಕಮಗಳೂರು: ರಾಜ್ಯ ಸರ್ಕಾರವು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 67 ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪೈಕಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ತಹಶೀಲ್ದಾರ್ ಆಗಿ ದಯಾನಂದ ಕೆ.ಎಸ್, ಮೂಡಿಗೆರೆ ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಆಗಿ ಶೈಲೇಶ್ ಎಸ್ ಪರಮಾನಂದ ಅವರನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ