ರೈಲು ಡಿಕ್ಕಿಯಾಗಿ ಒಬ್ಬನ ಸಾವು
– ಬಂಟ್ವಾಳದಲ್ಲಿ ನಡೆದ ದುರಂತ
– ಅಕ್ರಮ ಗೋಮಾಂಶ ವಶ
– ಕೂಡಿಗೆ ಸೇತುವೆ ಬಳಿ ಅಪರಿಚಿತ ಯುವಕನ ಶವ ಪತ್ತೆ
NAMMUR EXPRESS NEWS
ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಬಿಸಿರೋಡು ಸಮೀಪದ ಮಾರ್ನಬೈಲು ಎಂಬಲ್ಲಿ ನಡೆದಿದೆ. ಹರಿಶ್ಚಂದ್ರ ಮೃತಪಟ್ಟ ವ್ಯಕ್ತಿ.ಕೂಲಿ ಕಾರ್ಮಿಕನಾಗಿರುವ ಹರಿಶ್ಚಂದ್ರ ರೈಲ್ವೆ ಹಳಿಯನ್ನು ದಾಟುವ ಉದ್ದೇಶದಿಂದ ನಿಂತಿದ್ದ ವೇಳೆ ರೈಲು ಡಿಕ್ಕಿ ಹೊಡೆದಿರಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ ಗಾಯಾಳನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಡಿಕ್ಕಿಯಾದ ಕೂಡಲೇ ರೈಲ್ವೆ ಇಲಾಖೆಯ ಹಳಿಯ ಕಾಮಗಾರಿ ನೋಡಿಕೊಳ್ಳುವ ಸಿಬ್ಬಂದಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರು ಮಂಗಳೂರು ರೈಲ್ವೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೋಲೀಸ್ ಇಲಾಖೆಯ ಎ.ಎಸ್.ಐ.ಜಾನ್ ಕೊರಿಯ ಕೋಸ್ ಸ್ಥಳಕ್ಕೆ ಆಗಮಿಸಿ,ಮೃತದೇಹವನ್ನು ಮರಣೋತ್ತರ ಪರೀಕ್ಷೆ ಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯ ಮಾಹಿತಿ ಸಿಕ್ಕಿದಂತೆಹೊಯ್ಸಳ 112 ವಾಹನದ ಜೊತೆ ಎಎಸ್ ಐ ದೇವಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಅಕ್ರಮ ಗೋಮಾಂಶ ವಶ
ಬಿ.ಸಿ.ರೋಡು: ಅಕ್ರಮ ಗೋಮಾಂಸವನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಕಲ್ಲಡ್ಕದಲ್ಲಿ ಇಂದು ಮುಂಜಾನೆ ನಡೆದಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡದ ಮಾಹಿತಿ ಮೇರೆಗೆ ಇಂದು ಮುಂಜಾನೆ ಕಲ್ಲಡ್ಕ ಮದಕ ಬಳಿ ಬಿಸಿರೋಡ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಅಂದಾಜು 2 ಕಿಂಟ್ಬಾಲ್ ಗೋ ಮಾಂಸ, ಒಂದು ಆಟೋ, ಅಲ್ಲೋ ಕಾರು ಹಾಗೂ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಪೈಕಿ ಓರ್ವ ಪರಾರಿಯಾಗಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ಕೂಡಿಗೆ ಸೇತುವೆ ಬಳಿ ಅಪರಿಚಿತ ಯುವಕನ ಶವ ಪತ್ತೆ
ಪಟ್ರಮೆ : ಧರ್ಮಸ್ಥಳದಿಂದ ಪಟ್ರಮೆಗೆ ಹೋಗುವ ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ನೀರಿನಲ್ಲಿ ಮುಳುಗಿರುವ ಸ್ಥಿತಿಯಲ್ಲಿ ಫೆ.4ರಂದು ಬೆಳಗ್ಗೆ ಕಂಡು ಬಂದಿದೆ.ಈ ಬಗ್ಗೆ ಪೊಲೀಸ್ ರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರ ತನಿಖೆಯಿಂದ ಶವದ ಗುರುತು ತಿಳಿಯಬೇಕಿದೆ