ಪರಶುರಾಮ ಥೀಂ ಪಾರ್ಕ್ ಕೇಸ್: ಸುನೀಲ್ ಕುಮಾರ್ ಹೇಳಿದ್ದೇನು?
– ಅಂತೂ ಕೊನೆಗೂ ಪ್ರಕರಣಕ್ಕೆ ಮುಕ್ತಿ ಸಿಗಲಿದೆ
– ಮಂಗಳೂರಿನಿಂದ ಅಯೋಧ್ಯೆಗೆ ರೈಲು ನಡುವೆ ಸಂಪರ್ಕ
NAMMUR EXPRESS NEWS
ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿಚಾರದಲ್ಲಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದು ಸ್ವಾಗತ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ.
ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಎಂದು ಒತ್ತಾಯಿಸಿದ್ದಾರೆ. ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದ್ದಾರೆ.
ಮಂಗಳೂರಿನಿಂದ ಅಯೋಧ್ಯೆಗೆ ರೈಲು ನಡುವೆ ಸಂಪರ್ಕ
ಮಂಗಳೂರು: ಮಂಗಳೂರು ನಗರದಿಂದ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲು ವಿಶೇಷ ರೈಲು ಸೇವೆಯನ್ನು ನೀಡಲಾಗುತ್ತಿದೆ. ರೈಲು ಸಂಖ್ಯೆ 06517 ಕೊಯಮತ್ತೂರು-ದರ್ಶನ್ ನಗರ-ಕೊಯಮತ್ತೂರು ಆಸ್ತಾ, ಫೆಬ್ರವರಿ 8 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಹೊರಟು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಮೂಲಕ ಅಯೋಧ್ಯೆ ಜಂಕ್ಷನ್ಗೆ ಪ್ರಯಾಣಿಸಲಿದೆ.
ಫೆಬ್ರವರಿ 8 ರಂದು ಸಂಜೆ 5:50 ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಿ 6 ಗಂಟೆಗೆ ಹೊರಡಲಿದೆ. ರೈಲು ಫೆಬ್ರವರಿ 11 ರಂದು ಮುಂಜಾನೆ ಅಯೋಧ್ಯೆಯ ದರ್ಶನ್ ನಗರ ರೈಲು ನಿಲ್ದಾಣಕ್ಕೆ ಆಗಮಿಸಲಿದೆ. ಫೆಬ್ರವರಿ 12 ರಂದು ಬೆಳಿಗ್ಗೆ 8 ಗಂಟೆಗೆ ಅಯೋಧ್ಯೆಯಿಂದ ಮರಳಿ ಫೆಬ್ರವರಿ 14 ರ ಸಂಜೆ ಮಂಗಳೂರು ಜಂಕ್ಷನ್ಗೆ ತಲುಪಲಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.