1000 ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ ಪ್ರಕಟ
– ಕಂದಾಯ ಸಚಿವರಿಂದ ಅಧಿಕೃತ ಮಾಹಿತಿ
– ನೇಮಕಾತಿಗೆ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ
– ಯಾರಿಗೆ ಸಿಗುತ್ತೆ ಕೆಲಸ… ಸಂಬಳ ಎಷ್ಟು..?
NAMMUR EXPRESS NEWS
ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಇದೀಗ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಳೆದ ಹಲವು ತಿಂಗಳುಗಳಿಂದ ರಾಜ್ಯದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ 3 ಶೀಘ್ರದಲ್ಲಿಯೇ ನಡೆಯಲಿದೆ ಎಂಬ ಮಾಹಿತಿಯನ್ನು ಹಂಚಿಕೊಂಡಿತ್ತು. ಆದರೆ ಇದೀಗ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಈ ಹೊಸ ಪ್ರಕಟಣೆಯಲ್ಲಿ ಏನಿದೆ?
ಕಳೆದ ಫೆಬ್ರವರಿ, 14, 2024ರಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರು ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಪರೀಕ್ಷೆಯ ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವಹಿಸಲಾಗಿರುತ್ತದೆ ಮತ್ತು ನೇಮಕ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಉತ್ತರಿಸಿದ್ದಾರೆ.
ನೇಮಕಾತಿಗೆ ವಯೋಮಿತಿಯ ಅಧಿಕೃತ ಮಾಹಿತಿ
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವಯೋಮಿತಿ ವಿವರ ನೀಡಿರುವ ಕೃಷ್ಣ ಬೈರೇಗೌಡರು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಇರಬೇಕು ಮತ್ತು ಗರಿಷ್ಟ ವಯಸ್ಸು ವರ್ಗಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
• ಸಾಮಾನ್ಯ ವರ್ಗ – 35 ವರ್ಷ
• 28, 29, 38, 39 – 38 ವರ್ಷ
• ಪ. ಜಾತಿ, ಪ. ಪಂಗಡ ಮತ್ತು ಪ್ರ. ವರ್ಗ 1 – 40 ವರ್ಷ
ನೇಮಕಾತಿಗೆ ಪ್ರಕ್ರಿಯೆಯಲ್ಲಾದ ಬದಲಾವಣೆಗಳು
ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯು ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ಅಧಿಕೃತವಾಗಿ ಬದಲಾವಣೆ ಮಾಡಿ ಗ್ರಾಮ ಆಡಳಿತ ಅಧಿಕಾರಿ ಎಂದು ಮರುನಾಮಕರಣ ಮಾಡಿದೆ. ಹೆಸರಷ್ಟೇ ಅಲ್ಲದೇ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಬದಲಾವಣೆ ಮಾಡಿದ್ದು, ಈ ಮೊದಲು ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲು, ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು PUCಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಹೊಸ ಬದಲಾವಣೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಿಯುಸಿ ಶಿಕ್ಷಣ ಅರ್ಹತೆ ಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನಂತರ ಹೆಚ್ಚು ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.
ಮಾಸಿಕ ಸಂಬಳವೆಷ್ಟು?
ಗ್ರಾಮ ಆಡಳಿತ ಅಧಿಕಾರಿಯಾಗಿ ಆಯ್ಕೆಯಾದವರಿಗೆ ಪ್ರತಿ ತಿಂಗಳು ₹21,000 ರಿಂದ ₹42,000 ವರೆಗೆ ಸಂಬಳ ಇರುತ್ತದೆ. ಜತೆಗೆ ಸರಕಾರದ ಸಮಸ್ತ ಸೌಲಭ್ಯಗಳು ಅನ್ವಯವಾಗುತ್ತವೆ. ಶೀಘ್ರದಲ್ಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಯ ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಆದ್ದರಿಂದ ಸ್ಪರ್ಧಾರ್ಥಿಗಳು ಈಗಿನಿಂದಲೇ ಪರೀಕ್ಷೆ ತಯಾರಿಗೆ ಸಂಪೂರ್ಣ ಸಿದ್ಧತೆಯನ್ನು ಆರಂಭಿಸಿ. ಈ ನೇಮಕಾತಿಗೆ ಸಂಬಂಧಿಸಿದ ಮುಂದಿನ ಹಂತದ ಪ್ರತಿಯೊಂದು ಹೊಸ ಮಾಹಿತಿಯನ್ನು ಪಡೆಯಲು ನಮ್ಮ ಜಾಲತಾಣಕ್ಕೆ ಭೇಟಿ ನೀಡಿ.