ಕರಾವಳಿಯ ಬೆಡಗಿ ವಿಶ್ವ ಸುಂದರಿ ಸ್ಪರ್ಧೆಗೆ!
– ಭಾರತ ಪ್ರತಿನಿಧಿಸಲಿದ್ದಾರೆ 21 ವರ್ಷದ ಕನ್ನಡತಿ ಸಿನಿ ಶೆಟ್ಟಿ
– 28 ವರ್ಷಗಳ ಬಳಿಕ ಭಾರತದಲ್ಲಿ ಆಯೋಜನೆ
– ಈವರೆಗೆ ಭಾರತದ 6 ಮಂದಿಗೆ ವಿಶ್ವ ಸುಂದರಿ ಕಿರೀಟ
NAMMUR EXPRESS NEWS
ಬೆಂಗಳೂರು: 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಈ ಬಾರಿ ಭಾರತದಲ್ಲಿ ಮಾರ್ಚ್ ತಿಂಗಳಲ್ಲಿ ಮುಂಬೈನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ. 30 ದಶಕಗಳ ಬಳಿಕ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತದಲ್ಲಿ ಆಯೋಜಿಸಲಾಗಿದೆ. 28 ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಈ ಸ್ಪರ್ಧೆ ನಡೆದಿತ್ತು. ಈ ವರ್ಷ ಮಿಸ್ ವರ್ಲ್ಡ್ ಟ್ರ್ಯಾಂಡ್ ಫಿನಾಲೆ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ನನ್ ಸೆಂಟರ್ನಲ್ಲಿ ಮಾರ್ಚ್ 9 ರಂದು ನಡೆಯಲಿದೆ. ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಕನ್ನಡತಿ ಸಿನಿ ಶೆಟ್ಟಿ (21) ಪ್ರತಿನಿಧಿಸುತ್ತಿದ್ದಾರೆ. ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಐಟಿಡಿಸಿ) ಮಂಗಳವಾರ 71 ವಿಶ್ವ ಸುಂದರಿ ಕಾರ್ಯಕ್ರಮದ ಉದ್ಘಾಟನೆಯನ್ನು ಗುರುತಿಸಲು ನವದೆಹಲಿಯ ದಿ ಆಶಿಕ್ನಲ್ಲಿ ‘ದಿ ಓಪನಿಂಗ್ ಸೆರಮನಿ’ ಮತ್ತು ‘ಇಂಡಿಯಾ ವೆಲ್ಕಮ್ಸ್ ದಿ ವರ್ಲ್ಡ್ ಗಾಲಾ’ ಅನ್ನು ಆಯೋಜಿಸಲಿದೆ. ಫ್ಯಾಷನ್ ಡಿಸೈನರ್ ಅರ್ಚನಾ ಕೊಚ್ಚರ್ ಅವರು 71 ನೇ ವಿಶ್ವ ಸುಂದರಿ ಸ್ಪರ್ಧೆಯ ಅಧಿಕೃತ ಫ್ಯಾಷನ್ ಡಿಸೈನರ್ ಆಗಿದ್ದಾರೆ.
ಉಡುಪಿ ಮೂಲದ ಸಿನಿ ಶೆಟ್ಟಿ!
ಕರ್ನಾಟಕದ ಉಡುಪಿ ಮೂಲದ ಸಿನಿ ಶೆಟ್ಟಿ ಈ ಹಿಂದೆ ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ‘ಮಿಸ್ ಇಂಡಿಯಾ’ ಕಿರೀಟ ಮುಡಿಗೇರಿಸಿಕೊಂಡಿದ್ದರು. ಸಿನಿ ಶೆಟ್ಟಿ ಅಕೌಂಟಿಂಗ್ ಮತ್ತು ಫೈನಾನ್ಸ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಭರತನಾಟ್ಯ ನೃತ್ಯದಲ್ಲೂ ತರಬೇತಿ ಪಡೆದಿದ್ದಾರೆ. ಪ್ರಸ್ತುತ ಅವರು ಮಾರ್ಕೆಟಿಂಗ್ನಲ್ಲಿ ಕೆಲಸ ಮಾಡುತ್ತಿದ್ದಾರೆ.
ಭಾರತ 6 ಮಂದಿ ಗೆದ್ದಿದ್ದಾರೆ!
ಭಾರತದ ಆರು ಮಹಿಳೆಯರು ವಿಶ್ವ ಸುಂದರಿ ಕಿರೀಟವನ್ನು ಗೆದ್ದಿದ್ದಾರೆ. ರೀಟಾ ಫರಿಯಾ 1966 ರಲ್ಲಿ ಮೊದಲ ಬಾರಿಗೆ ಪ್ರತಿಷ್ಠಿತ ವಿಶ್ವ ಸುಂದರಿ ಪ್ರಶಸ್ತಿಯನ್ನು ಭಾರತಕ್ಕೆ ತಂದರು. 1994 ರಲ್ಲಿ ಐಶ್ವರ್ಯಾ ರೈ, 1997 ರಲ್ಲಿ ಡಯಾನಾ ಹೇಡನ್, 1999 ರಲ್ಲಿ ಯುಕ್ತಾ ಮುಖಿ ವಿಶ್ವ ಸುಂದರಿ ಕಿರೀಟವನ್ನು ಪಡೆದರು. 2006ರಲ್ಲಿ ಪ್ರಿಯಾಂಕಾ ಚೋಪ್ರಾ ಮತ್ತು 2017ರಲ್ಲಿ ಮಾನುಷಿ ಚಿಲ್ಲರ್ ಈ ಸಾಧನೆ ಮಾಡಿದವರಲ್ಲಿ ಪ್ರಮುಖರಾಗಿದ್ದಾರೆ.