ಮಾರ್ಚ್ 1ರವರೆಗೆ ದಕ್ಷಿಣ ಒಳನಾಡಿನಲ್ಲಿ ಭರ್ಜರಿ ಮಳೆ.!
– ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ
– ಹವಾಮಾನ ಇಲಾಖೆ ಮುನ್ಸೂಚನೆ
NAMMUR EXPRESS NEWS
ಬೆಂಗಳೂರು: ಕರ್ನಾಟಕದಲ್ಲಿ ಭಾರೀ ತಾಪಮಾನ ಏರಿಕೆಯಾಗಿದೆ. ಆದರೆ ಈ ಮಧ್ಯೆ ದಕ್ಷಿಣ ಒಳನಾಡಿನ 4 ಜಿಲ್ಲೆಗಳಲ್ಲಿ ಮಾರ್ಚ್ 1ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಯಾದಗಿರಿ, ರಾಮನಗರ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. ಇದರ ಜೊತೆಗೆ ದಕ್ಷಿಣ ಒಳನಾಡಿನ ಒಂದೆರಡು ಕಡೆ ಹಗುರ ಮಳೆ ಜೊತೆಗೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.