ಪಿಎಚ್ಡಿ ವಿದ್ಯಾರ್ಥಿ ನಾಪತ್ತೆ; ನೂರಾರು ಅನುಮಾನ!
– ಎಂಟು ದಿನದ ನಂತರ ಸಿಕ್ಕ ಸ್ಕೂಟಿ; ಲವ್ ಜಿಹಾದ್ ಶಂಕೆ
– ಎರಡು ರಿಕ್ಷಾಗಳ ನಡುವೆ ಅಪಘಾತ; ಹತ್ತಕ್ಕೂ ಅಧಿಕ ಮಂದಿಗೆ ಗಾಯ!
NAMMUR EXPRESS NEWS
ಮಂಗಳೂರು : ಎಂಟು ದಿನಗಳ ಹಿಂದೆ ಕೋಟೆಕಾರು ಸಮೀಪದ ಪಿಜಿಯೊಂದರಿಂದ ನಾಪತ್ತೆಯಾಗಿರುವ ದೇರಳಕಟ್ಟೆಯ ಪಿಎಚ್ಡಿ ವಿದ್ಯಾರ್ಥಿನಿಯ ಸ್ಕೂಟಿ ಭಾನುವಾರ ಸುರತ್ಕಲ್ನಲ್ಲಿ ಪತ್ತೆಯಾಗಿದೆ. ಇದೊಂದು ಲವ್ ಜಿಹಾದ್ ಪ್ರಕರಣ ಎಂಬ ಆರೋಪ ಕೇಳಿ ಬಂದಿದೆ. ಪುತ್ತೂರಿನ ದಿ. ಸತೀಶ್ ಹೆಬ್ಬಾರ್ ಎಂಬವರ ಪುತ್ರಿ ಚೈತ್ರಾ ಹೆಬ್ಬಾರ್ (27) ನಾಪತ್ತೆಯಾದವರು. ಕೋಟೆಕಾರು ಮಾಡೂರು ಬಳಿ ಪಿಜಿಯಲ್ಲಿ ನೆಲೆಸಿದ್ದ ಈಕೆ ಎಂಎಸ್ಸಿ ಬಳಿಕ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಫುಡ್ ಸೆಕ್ಯುರಿಟಿ ವಿಭಾಗದಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಫೆ. 17ರಂದು ಪಿಜಿಯಿಂದ ಹೋದಾಕೆ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಾರೆ. ಪುತ್ತೂರಿನ ಮುಸ್ಲಿಂ ಯುವಕ ಮಾಡೂರಿನಲ್ಲಿರುವ ಈ ಪಿಜಿಗೆ ಆಗಾಗ ಬಂದು ಹೋಗುತ್ತಿದ್ದ.
10 ದಿನಗಳ ಹಿಂದೆ ಸ್ಥಳೀಯರು ಈ ಸಂಗತಿಯನ್ನು ಬಜರಂಗದಳದ ಗಮನಕ್ಕೆ ತಂದಿದ್ದರು. ಪಿಜಿಯಲ್ಲಿ ವಿಚಾರಿಸಿದಾಗ ಹಿಂದೂ ವಿದ್ಯಾರ್ಥಿನಿಯರು ಇರುತ್ತಿದ್ದ ಪಿಜಿಯಲ್ಲಿ ಆತನೂ ಉಳಿಯುತ್ತಿದ್ದ ಎಂಬ ಸಂಗತಿ ಬಯಲಾಗಿತ್ತು ಎಂದು ಬಜರಂಗದಳ ದೂರಿದೆ. ಈ ಕುರಿತು ಆಕೆಯ ಚಿಕ್ಕಪ್ಪ ಪ್ರಕಾಶ್ ಹೆಬ್ಬಾರ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ನಾಪತ್ತೆಯಾಗಿ 8 ದಿನಗಳು ಕಳೆದ ಬಳಿಕ ಭಾನುವಾರ ಸುರತ್ಕಲ್ ಸಮೀಪ ಚೈತ್ರಾ ಉಪಯೋಗಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಪತ್ತೆಯಾಗಿದೆ. ಆ ಯುವಕ ಡ್ರಗ್ ಪೆಡ್ಲರ್ ಆಗಿರುವ ಸಂಶಯದಿಂದ ಚೈತ್ರಾಳ ದೊಡ್ಡಪ್ಪನನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿತ್ತು.
ದೊಡ್ಡಪ್ಪ ಈ ಬಗ್ಗೆ ಯುವತಿಯ ವಿಚಾರಣೆ ನಡೆಸಿದ ಮರುದಿನ ಫೆ. 17 ರಂದು ಚೈತ್ರಾ ದಿಢೀರ್ ನಾಪತ್ತೆಯಾಗಿದ್ದಾಳೆ. ಆ ಯುವಕನೇ ಚೈತ್ರಾಳನ್ನು ಅಪಹರಿಸಿರುವ ಸಾಧ್ಯತೆಯಿದೆ ಎಂದು ಆರೋಪಿಸಲಾಗಿದೆ. ಈ ಯುವಕನೇ ಆಕೆಯನ್ನು ಅಪಹರಿಸಿರುವ ಸಾಧ್ಯತೆಯಿದೆ. ಆತನನ್ನು ತಕ್ಷಣ ಬಂಧಿಸಬೇಕು. ಮೂರು ದಿನಗಳ ಒಳಗೆ ಯುವತಿಯನ್ನು ಪತ್ತೆ ಮಾಡದೆ ಇದ್ದಲ್ಲಿ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಬಜರಂಗದಳ ಉಳ್ಳಾಲ ಪ್ರಖಂಡ ಸಂಚಾಲಕ ಅರ್ಜುನ್ ಮಾಡೂರು ಎಚ್ಚರಿಸಿದ್ದಾರೆ.
ಎರಡು ರಿಕ್ಷಾಗಳ ನಡುವೆ ಅಪಘಾತ; ಹತ್ತಕ್ಕೂ ಅಧಿಕ ಮಂದಿಗೆ ಗಾಯ!
ಎರುಂಬು ನಿವಾಸಿ ಹಮೀದ್ ಎರುಂಬು, ಪಡಿಬಾಗಿಲು ನಿವಾಸಿ ರವಿ ಪಡಿಬಾಗಿಲು ಅವರ ರಿಕ್ಷಾಗಳಿಗೆ ನೇರ ರಸ್ತೆಯಲ್ಲಿ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಒಂದು ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ. ಘಟನೆಯಲ್ಲಿ ಅಳಿಕೆ ಗ್ರಾಮದ ಮಡಿಯಾಲ ನಿವಾಸಿ ಅಮ್ಮು ಮೂಲ್ಯ (69) ಅವರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ವಿಟ್ಲ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.