- ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧೆ?
ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಶಿರಾ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದೆ. ಜೊತೆಗೆ ಸಿಎಂ ಪುತ್ರ ವಿಜಯೇಂದ್ರ ಅವರೂ ಗೆದ್ದಿದ್ದಾರೆ. ಈ ನಡುವೆ ವಿಜಯೇಂದ್ರ ಪವರ್ ಮತ್ತೊಮ್ಮೆ ಸಾಭೀತಾಗಿದೆ.
ಈ ನಡುವೆ ಹೊಸದೊಂದು ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಯಡಿಯೂರಪ್ಪ ಅವಧಿಯಲ್ಲೇ ಮಗ ವಿಜಯೇಂದ್ರ ಅವರನ್ನು ರಾಜಕೀಯ ಅಖಾಡಕ್ಕೆ ತರಲು ಮಾಸ್ಟರ್ ಪ್ಲಾನ್ ಮಾಡಲಾಗುತ್ತಿದೆ. ಬಹುತೇಕ ಲಿಂಗಾಯತ ಸಮಾಜ ಹೆಚ್ಚಿರುವ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಆದರೆ ಇದು ಸುಳ್ಳೋ ಸತ್ಯವೋ ಈ ಬಗ್ಗೆ ಸ್ವತಃ ಬಿಎಸ್ವೈ ಸ್ಪಷ್ಟನೆ ನೀಡಿದ್ದಾರೆ.
ವಿಜಯೇಂದ್ರ ಈಗಾಗಲೇ ಸ್ಪಷ್ಟ ಪಡಿಸಿದ್ದಾರೆ. ಈಗ ಸ್ಪರ್ಧಿಸುವುದಿಲ್ಲ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವರಿಷ್ಠರು ಅಪೇಕ್ಷಿಸಿದರೆ ಸ್ಪರ್ಧಿಸಲಿದ್ದಾರೆ,” ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಆದರೆ ವಿಜಯೇಂದ್ರ ಈಗಲೇ ಸಿದ್ಧರಾಗಿದ್ದಾರೆ ಎನ್ನಲಾಗಿದೆ.