ಎಲ್ ಪಿಜಿ ಗ್ರಾಹಕರಿಗೆ ಬಿಗ್ ಶಾಕ್..!
– ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಏರಿಕೆ
– ಇಂದಿನಿಂದಲೇ ಹೊಸದರ ಅನ್ವಯ
NAMMUR EXPRESS NEWS
ನವದೆಹಲಿ: ಮಾರ್ಚ್ ಮೊದಲ ದಿನವೇ ಜನರಿಗೆ ಬಿಗ್ ಶಾಕ್ ಆಗಿದೆ. ಹೌದು ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಶುಕ್ರವಾರ ವಾಣಿಜ್ಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ಗಳ ಬೆಲೆಗಳನ್ನು ಪರಿಷ್ಕರಿಸಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. ಈಗಿನ ಬೆಲೆಗಳ ಏರಿಕೆಯ ನಂತರ, ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ 1,795 ರೂ.ಗೆ ಲಭ್ಯವಾಗಲಿದೆ. ಬೆಲೆ ಏರಿಕೆಯು ಕೋಲ್ಕತ್ತಾ, ಮುಂಬೈ, ಚೆನ್ನೈ ಮತ್ತು ಇತರ ಮಹಾನಗರಗಳ ಜನರ ಮೇಲೂ ಪರಿಣಾಮ ಬೀರಿದೆ.