ಪ್ಲಬಿಕ್ ಪರೀಕ್ಷೆ ರದ್ದು ಮಾಡಿದ ರಾಜ್ಯ ಸರ್ಕಾರ!?
– 5,8,9 ಮತ್ತು 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಇಲ್ಲ
– ಏನಿದು ವಿವಾದ..? ಏನಿದು ಆದೇಶ..?
NAMMUR EXPRESS NEWS
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ 5,8,9 ಮತ್ತು 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ ಸಾರ್ವಜನಿಕ ಪರೀಕ್ಷೆಗೆ ಹೆಚ್ಚಿನ ಅನುಮತಿ ನೀಡಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ ಬೋರ್ಡ್ ಎಕ್ಸಾಂ ಸುತ್ತೋಲೆಯನ್ನು ಮಾಡಿ ಏಕಸದಸ್ಯ ಪೀಠ ರದ್ದು ಆದೇಶ ನೀಡಿದೆ. ಹೀಗಾಗಿ ಈ ಬಾರಿ ಈ ತರಗತಿಗಳಿಗೆ ಬೋರ್ಡ್ ಎಕ್ಸಾಂ ಇರುವುದಿಲ್ಲ. ರಾಜ್ಯ ಪಠ್ಯಕ್ರಮದ ಶಾಲೆಗಳು 5, 8, 9 ಮತ್ತು 11 ನೇ ತರಗತಿಗಳ ಶಾಲಾ ಮಟ್ಟದ ಪರೀಕ್ಷೆಗೆ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಈ ಹಿಂದೆ ಸುತ್ತೋಲೆ ಹೊರಡಿಸಿದೆ. ಇದನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರ ನ್ಯಾಯಪೀಠ ತೀರ್ಪು ಪ್ರಕಟಿಸಿದೆ. 9ನೇ ತರಗತಿ ಮತ್ತು 11 ನೇ ತರಗತಿಯ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಂಡುಬಂದಿದೆ ಎಂದು ಪ್ರಾಥಮಿಕ ಮತ್ತು ಚಿಕಿತ್ಸಕ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು.