ಎಸ್ಸೆಸ್ಸೆಲ್ಸಿ ಪರೀಕ್ಷೆ: ಹೊಸ ರೂಲ್ಸ್..!
– ದ್ವಾರದ ಕಡೆ ಮುಖ ಮಾಡುವುದು ನಿರ್ಬಂಧ
– ಪರೀಕ್ಷಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟೀವಿ ಅಳವಡಿಕೆ
NAMMUR EXPRESS NEWS
ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಶುರುವಾಗಿದೆ. ಮಾ.25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತು ಪರೀಕ್ಷೆ ಬರೆಯುವಂತೆ ಆಸನದ ವ್ಯವಸ್ಥೆ ಮಾಡಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚಿಸಿದೆ. ಹೀಗೆ ಮಾಡಿದಾಗ ಅಕ್ರಮ ಎಸಗಿದರೆ ದ್ವಾರದಲ್ಲೇ ಕಾಣುತ್ತದೆ. ಆದ್ದರಿಂದ ಈ ಕ್ರಮ ಜರುಗಿಸಲಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಪರೀಕ್ಷಾ ಸಿಬ್ಬಂದಿ ವರ್ಗದವರು ನಿರ್ವಹಿಸಬೇಕಾದ ಮಾರ್ಗಸೂಚಿಗಳನ್ನು ಪ್ರಕಟಿಸಿರುವ ಮಂಡಳಿಯು, ಸಾಮಾನ್ಯ ವಾಗಿ ತರಗತಿ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ದ್ವಾರದ ಕಡೆಗೆ ಮುಖ ಮಾಡಿಕೊಂಡು ಕುಳಿತುಕೊಳ್ಳುತ್ತಾರೆ.
ಇದನ್ನು ತಪ್ಪಿಸಲು ಪ್ರವೇಶ ದ್ವಾರಕ್ಕೆ ವಿರುದ್ಧವಾಗಿ ಮುಖ ಮಾಡಿ ಕುಳಿತುಕೊಳ್ಳುವಂತೆ ಆಸನದ ವ್ಯವಸ್ಥೆ ಮಾಡಬೇಕು. ಯಾವುದೇ ಕೇಂದ್ರದಲ್ಲೂ ವಿದ್ಯಾರ್ಥಿಗಳು ಬಯಲಿನಲ್ಲಿ ಕುಳಿತು ಪರೀಕ್ಷೆ ಬರೆಯದಂತೆ ಆಯಾ ಜಿಲ್ಲಾ ಉಪನಿರ್ದೇಶಕರು ಮುಂಜಾಗ್ರತಾ ಕ್ರಮ ವಹಿಸಬೇಕು ಸೂಚಿಸಿದೆ. ಉಳಿದಂತೆ ಪರೀಕ್ಷೆಯ ಪಾವಿತ್ರ್ಯತೆ ಕಾಪಾಡುವುದು ಆಯಾ ಜಿಲ್ಲಾ ಉಪ ನಿರ್ದೇಶಕರುಗಳ ಜವಾಬ್ದಾರಿ. ಮಾರ್ಗಾಧಿಕಾರಿಗಳಿಂದ ಪ್ರಶ್ನೆಪತ್ರಿಕೆಗಳನ್ನು ಸ್ವೀಕರಿಸಿ ಅಲ್ವೇರಾದಲ್ಲಿಟ್ಟುಕೊಳ್ಳುವ, ಪರೀಕ್ಷಾ ಕೊಠಡಿಗಳಿಗೆ ಕಡ್ಡಾಯವಾಗಿ ಸಿಸಿಟೀವಿ ಅಳವಡಿಸಬೇಕು ಎಂದು ಸೂಚಿಸಿದೆ.