ಇಂದಿನಿಂದ ರಂಜಾನ್ ಉಪವಾಸ ಆರಂಭ..!
– ರಾಜ್ಯದ ಉರ್ದು ಶಾಲೆಗಳ ವೇಳಾಪಟ್ಟಿ ಬದಲಾವಣೆ
– ರಾಜ್ಯ ಸರ್ಕಾರದ ಆದೇಶ!
NAMMUR EXPRESS NEWS
ಬೆಂಗಳೂರು: ಪವಿತ್ರ ರಂಜಾನ್ ತಿಂಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕದ ಶಾಲೆಗಳು ಉರ್ದು ಶಾಲೆಗಳ ವಿದ್ಯಾರ್ಥಿಗಳಿಗೆ ರಂಜಾನ್ ತಿಂಗಳನ್ನು ಆಚರಿಸಲು ಅನುಕೂಲವಾಗುವಂತೆ ಶಾಲಾ ಸಮಯವನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರವು ಹೊರಡಿಸಿದ ಸುತ್ತೋಲೆಯಲ್ಲಿ ರಂಜಾನ್ ತಿಂಗಳಲ್ಲಿ ಕಿರಿಯ, ಹಿರಿಯ ಮತ್ತು ಪ್ರೌಢಶಾಲಾ ಶಾಲೆಗಳ ಸಮಯವನ್ನು ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45 ಕ್ಕೆ ಬದಲಾಯಿಸಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಶಾಲೆಗಳಿಗೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಉಲ್ಲೇಖಿತ-1ರ ಸುತ್ತೋಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರ ವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ.