ಬಾಲಕಿಗೆ ಕಿರಿಕಿರಿ: ಯಡಿಯೂರಪ್ಪ ವಿರುದ್ಧ ಕೇಸ್!?
– ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್
– ಸಹಾಯ ಕೇಳಲು ಹೋಗಿದ್ದಾಗ ಲೈಂಗಿಕ ಕಿರುಕುಳ ದೂರು
– ನಿಜವೋ ಸುಳ್ಳೋ.. ದೂರು ಕೊಟ್ಟಿದ್ದು ಯಾಕೆ.?
NAMMUR EXPRESS NEWS
ಬೆಂಗಳೂರು: ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು 17 ವರ್ಷದ ಬಾಲಕಿ ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ. ಲೋಕ ಸಭಾ ನಡುವೆ ಪೋಕೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ. ಆದರೆ ದೂರು ಎಷ್ಟು ಸತ್ಯ ಎಂಬುದು ಈಗ ಕುತೂಹಲ ಮೂಡಿಸಿದೆ.