ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು: ಆಪರೇಷನ್!
– ವಿದೇಶಿ ವೈದ್ಯರಿಂದ ಹೃದಯ ಶಸ್ತ್ರ ಚಿಕಿತ್ಸೆಗೆ ಸಿದ್ಧತೆ
– ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು
NAMMUR EXPRESS NEWS
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ಅನಾರೋಗ್ಯಕ್ಕೆ ಒಳಗಾಗಿದ್ದು ಅವರಿಗೆ ಗುರುವಾರ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿರುವ ಕುಮಾರಸ್ವಾಮಿ ಅವರಿಗೆ ಗುರುವಾರ ಶಸ್ತ್ರ ಚಿಕಿತ್ಸೆ ನಡೆಯಲಿದೆ ಎಂದು ತಿಳಿದುಬಂದಿದೆ.
ಅಮೆರಿಕದ ಪರಿಣಿತ ವೈದ್ಯರು ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದು, ಶಸ್ತ್ರಚಿಕಿತ್ಸೆ ಬಳಿಕ 2-3 ದಿನ ವಿಶ್ರಾಂತಿ ಪಡೆಯುವ ಕುಮಾರಸ್ವಾಮಿ ಮಾ.25 ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಜತೆ ಮೈತ್ರಿ ಮಾಡಿಕೊಂಡು ಕಣಕ್ಕೆ ಇಳಿದಿರುವ ಕುಮಾರಸ್ವಾಮಿ ರಾಜ್ಯದ ಹಾಸನ, ಮಂಡ್ಯ, ತುಮಕೂರು ಪೈಕಿ ಯಾವುದಾದ್ರೂ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ.