ಧಾರ್ಮಿಕ, ಮನೆ ಕಾರ್ಯಕ್ರಮಗಳಿಗೆ ನೀತಿ ಸಂಹಿತೆ ಅಡ್ಡಿ ಇಲ್ಲ!
– ಶುಭ ಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗಲ್ಲ
– ಚುನಾವಣಾ ಆಯೋಗ ಮಾಹಿತಿ: ಏನಿದು ಮಾಹಿತಿ?
NAMMUR EXPRESS NEWS
ಬೆಂಗಳೂರು: ಶುಭಸಮಾರಂಭ, ಧಾರ್ಮಿಕ ಕಾರ್ಯಗಳಿಗೆ ನೀತಿಸಂಹಿತೆ ಅಡ್ಡಿಯಾಗಲ್ಲ ಎಂಬುದಾಗಿ ಚುನಾವಣಾ ಆಯೋಗವು ಸ್ಪಷ್ಟ ಪಡಿಸಿದೆ. ಈ ಮೂಲಕ ಶುಭ ಸಮಾರಂಭ ನಡೆಸೋರಿಗೆ, ಧಾರ್ಮಿಕ ಕಾರ್ಯದಲ್ಲಿ ನಿರತರಾದವರಿಗೆ ನಿರಾಳತೆ ಸಿಕ್ಕಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಕುರಿತು ಜನರಿಗೆ ಅನೇಕ ಗೊಂದಲ ಇತ್ತು. ಆದ್ರೆ ಆಯೋಗದ ಮಾಹಿತಿ ಪ್ರಕಾರ ಮಾದರಿ ಚುನಾವಣೆ ನೀತಿ ಸಂಹಿತೆ ಎನ್ನುವುದು ರಾಜಯಕೀಯ ಪಕ್ಷಗಳು, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳು ಹಾಗೂ ಸರ್ಕಾರಿ ನೌಕರರಿಗೆ ಅನ್ವಯಿಸುತ್ತದೆ. ಸಾರ್ವಜನಿಕರರಿಗೆ ಯಾವುದೇ ನಿರ್ಬಂಧವಿಲ್ಲ. ಮದುವೆ ಸೇರಿದಂತೆ ಯಾವುದೇ ಕೌಟುಂಬಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲು ಚುನಾವಣಾಧಿಕಾರಿಗಳ ಅನುಮತಿ ಬೇಕಿಲ್ಲ.
ಯಾವುದೇ ಧಾರ್ಮಿಕ ಆಚಾರ-ವಿಚಾರ, ಸಂಪ್ರದಾಯಗಳಿಗೆ ಮಾದರಿ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಇದಕ್ಕೆ ಅನುಮತಿ ಪಡೆಯುವ ಅಗತ್ಯವೂ ಇಲ್ಲ. ಆದರೆ ಧಾರ್ಮಿಕ ಆಚರಣೆಗಳು ರಾಜಕೀಯ ಕಾರ್ಯಕ್ರಮಗಳಾಗಿ ಪರಿವರ್ತನೆಯಾಗಬಾರದು. ರಾಜಕೀಯ ಕಾರ್ಯಕ್ರಮವಾಗಿ ಪರಿವರ್ತನೆಯಾದರೆ ಅದು ನೀತಿ ಸಂಹಿತೆ ಉಲ್ಲಂಘನೆಯಾಗಲಿದೆ. ಆ ಕಾರ್ಯಕ್ರಮಕ್ಕೆ ಯಾವುದೇ ರಾಜಕಾರಣಿ ಭಾಗಿಯಾಗಬಾರದು.
ಚುನಾವಣಾ ಕಾರ್ಯ ಜೊತೆಗೆ ಚುನಾವಣಾ ನೀತಿ ನಿಯಮಗಳಿಗೆ ಬದ್ಧವಾಗಿ ಸಾರ್ವಜನಿಕರಿಗೆ ಅನುಕೂಲವಾಗುವ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಹಾಗೂ ಜಿಲ್ಲೆಯ ಬರ ಪರಿಹಾರ ಕಾರ್ಯವನ್ನೂ ನಿರ್ವಹಿಸಬಹುದು.
ಮಾದರಿ ನೀತಿ ಸಂಹಿತೆ ಜಾರಿಗೆ ಸಂಬಂಧಪಟ್ಟಂತೆ ಈಗಾಗಲೇ ಮಾರ್ಚ್ 16 ರಿಂದಲೇ ಪ್ರಚಾರಕ್ಕೆ ಬಳಸಿದಂತಹ ಪೋಸ್ಟರ್ಸ್, ಬ್ಯಾನರ್ಸ್ ಗಳನ್ನು ಇತ್ಯಾದಿಗಳನ್ನು ತೆರವುಗೊಳಿಸಲಾಗಿದೆ. ಇದಕ್ಕಾಗಿ ಎಫ್ಎಸ್ಟಿ, ಎಸ್ಎಸ್ಟಿ, ವಿವಿಟಿ ಸೇರಿದಂತೆ ಬೇರೆ ಬೇರೆ ತಂಡಗಳನ್ನು ರಚನೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಪ್ರತಿ ತಾಲ್ಲೂಕಿಗೆ ತಾ.ಪಂ ಇಒ ಹಂತದಲ್ಲಿ ನೋಡಲ್ ಅಧಿಕಾರಿಗಳಾಗಿ, ನಗರ ವ್ಯಾಪ್ತಿಯಲ್ಲಿ ನಗರಸಭೆ, ಮುಖ್ಯಾಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗುತ್ತಿದೆ. ಇದರ ಜೊತೆಗೆ ಎಲ್ಲಾ ಜಿಲ್ಲೆಯಾದ್ಯಂತ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ.
ಅಕ್ರಮಗಳ ಮೇಲೆ ಅಧಿಕಾರಿಗಳ ಕಣ್ಣು!
ಉಚಿತ ಕೊಡುಗೆ, ಮಾದರಿ ನೀತಿ ಸಂಹಿತೆ ಉಲಂಘನೆ, ಹಣ ಸಾಗಣೆ, ಆಮಿಷ, ಬಾಡೂಟ ಸೇರಿ ಚುನಾವಣೆ ಅಕ್ರಮಗಳ ಮೇಲೆ ಆಯೋಗ ಕಣ್ಣಿಟ್ಟಿದೆ. ಹಣ ತೆಗೆದುಕೊಂಡು ಹೋಗುವಾಗ ಹಣದ ಮೂಲದ ಬಗ್ಗೆ ಸೂಕ್ತ ದಾಖಲೆಯನ್ನು ಪ್ರಸ್ತುತ ಪಡಿಸಿದಿದ್ರೆ ಹಣ ವಶಪಡಿಸಿಕೊಳ್ಳಲಾಗುತ್ತದೆ.
ಮತದಾನ ಎಲ್ಲರ ಹಕ್ಕು: ಮತ ಚಲಾಯಿಸಿ..!
ಮತದಾನ ಬಹಿಷ್ಕರಿಸದೇ, ಹಕ್ಕು ಚಲಾಯಿಸಬೇಕು. ಮತದಾನ ಬಹಿಷ್ಕಾರ ಮಾಡಿ, ತಮ್ಮ ಹಕ್ಕನ್ನು ಮೊಟಕುಗೊಳಿಸಬಾರದು. ಮತದಾನದಿಂದ ಯಾರೂ ವಂಚಿತರಾಗಬಾರದು. ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ತಮ್ಮ ಹಕ್ಕನ್ನು ಚಲಾವಣೆ ಮಾಡುವುದರ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕು.