- ರೋಷನ್ ಬೇಗ್ ಬಂಧನದ ಬಳಿಕ ಅಧಿಕಾರಿ ಅರೆಸ್ಟ್
ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
ಮಾಜಿ ಸಚಿವ ರೋಷನ್ ಬೇಗ್ ಅವರು ಈ ಪ್ರಕರಣದಲ್ಲಿ 10,ಕೋಟಿ ಹಣ ಪಡೆದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿರುವ ನಡುವೆ ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಮನ್ಸೂರ್ ಖಾನ್ ಅವರ ಹಣ ರಿಯಲ್ ಎಸ್ಟೇಟ್ ವಲಯದಲ್ಲಿ ಹೂಡಿಕೆಯಾಗಿದೆ. ಮನ್ಸೂರ್ ಖಾನ್ನಿಂದ 3 ರಿಂದ 4 ಕೋಟಿ ರೂ. ಹಣವನ್ನು ಪಿ.ಡಿ. ಕುಮಾರ್ ಪಡೆದಿದ್ದರು ಎಂದು ಸಿಬಿಐ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯದ ಎದುರು ಬಂಧಿತನನ್ನು ಹಾಜರುಪಡಿಸಿದ್ದರು.
ನಂತರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಕುಮಾರ್ ಅವರನ್ನು 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಐಎಂಎ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮುಂದೆ ದೊಡ್ಡ ದೊಡ್ಡವರ ಹೆಸರು ಬಂದರೂ ಅಚ್ಚರಿ ಇಲ್ಲ.!.