ಏ.1ರಿಂದ 2,000 ರೂ. ನೋಟು ವಿನಿಮಯ
– ಠೇವಣಿ ತಾತ್ಕಾಲಿಕ ಸ್ಥಗಿತ ಆರ್.ಬಿ.ಐ ಘೋಷಣೆ
NAMMUR EXPRESS NEWS
ನವದೆಹಲಿ: ದೇಶಾದ್ಯಂತ ಏ.1ರಿಂದ ತನ್ನ 19 ವಿತರಣಾ ಕಚೇರಿಗಳಲ್ಲಿ 2,000 ರೂ.ಗಳ ನೋಟುಗಳ ವಿನಿಮಯ ಅಥವಾ ಠೇವಣಿ ಸಾಧ್ಯವಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಿಸಿದೆ. ಖಾತೆಗಳ ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ ಈ ತಾತ್ಕಾಲಿಕ ನಿಲುಗಡೆಯಾಗಿದೆ. ಎಂದು ಮಾಹಿತಿ ನೀಡಿದೆ. ವಾರ್ಷಿಕ ಮುಚ್ಚುವಿಕೆಗೆ ಸಂಬಂಧಿಸಿದ ಕಾರ್ಯಾಚರಣೆಗಳಿಂದಾಗಿ 2,000 ರೂ.ಗಳ ನೋಟುಗಳ ವಿನಿಮಯ / ಠೇವಣಿ ಸೌಲಭ್ಯವು ಏ.1ರಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ 19 ವಿತರಣಾ ಕಚೇರಿಗಳಲ್ಲಿ ಲಭ್ಯವಿರುವುದಿಲ್ಲ. ಮೇ 19, 2023 ರಂದು ಚಲಾವಣೆಯಿಂದ 2,000 ರೂ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಆರ್.ಬಿ.ಐ ಈ ಹಿಂದೆ ಘೋಷಿಸಿತ್ತು. ಫೆಬ್ರವರಿ 29 ರ ಹೊತ್ತಿಗೆ, ಸುಮಾರು 97.62 ಪ್ರತಿಶತದಷ್ಟು 2,000 ರೂ ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ಮರಳಿವೆ. 8,470 ಕೋಟಿ ಮೌಲ್ಯದ ಹಿಂಪಡೆದ ನೋಟುಗಳು ಮಾತ್ರ ಇನ್ನೂ ಸಾರ್ವಜನಿಕರ ವಶದಲ್ಲಿವೆ.