ಕರ್ನಾಟಕದಲ್ಲಿ ನಡೆಯುವ ಮತದಾನದ 2 ದಿನವೂ ಸಾರ್ವತ್ರಿಕ ರಜೆ
– ಏ.26, ಮೇ 7ರಂದು ರಜೆ ಘೋಷಣೆ
– ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ
NAMMUR EXPRESS NEWS
ಬೆಂಗಳೂರು: ಲೋಕಸಭೆಗೆ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮತದಾನದ ದಿನ ಆಯಾ ಭಾಗದ ಸರಕಾರಿ, ಸರಕಾರಿ ಸ್ವಾಮ್ಯದ ಸಂಸ್ಥೆಗಳು, ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ವೇತನ ಸಹಿತ ಸಾರ್ವತ್ರಿಕ ರಜೆ ಘೋಷಿಸಲಾಗಿದೆ.
ಏ. 26 ಮತ್ತು ಮೇ 7ರಂದು ಚುನಾವಣೆ ಮತ್ತು ಒಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ನಡೆಯಲಿದೆ. ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿ ಯಲ್ಲಿರುವ ಎಲ್ಲಾ ರಾಜ್ಯ ಸರಕಾರಿ ಕಚೇರಿ ಗಳು, ಶಾಲಾ- ಕಾಲೇಜು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆ ಘೋಷಿಸಿದೆ. ಈ ರಜೆ ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ.