ಏಪ್ರಿಲ್ 10ರಿಂದ 15ರೊಳಗೆ ದ್ವಿತೀಯ ಪಿಯು ಫಲಿತಾಂಶ?
– 5, 8ಮತ್ತು 9ನೇ ತರಗತಿಗಳ ಫಲಿತಾಂಶ ಏ.10ಕ್ಕೆ ಸಾಧ್ಯತೆ
– ವಿದ್ಯಾರ್ಥಿಗಳಿಗೆ, ಪೋಷಕರಿಗೆ ಕುತೂಹಲ
NAMMUR EXPRESS NEWS
ಬೆಂಗಳೂರು: ದ್ವಿತೀಯ ಪಿಯು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದ್ದು, ಏಪ್ರಿಲ್ 10ರಿಂದ 15ರೊಳಗೆ ಫಲಿತಾಂಶ ಪ್ರಕಟಿಸುವ ನಿರೀಕ್ಷೆ ಇದೆ. ಮಾ.25ರಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕಳೆದ ಮಾ.1ರಿಂದ 22ರವರೆಗೆ ನಡೆದಿತ್ತು. ಮೌಲ್ಯಮಾಪನ ಕಾರ್ಯ ಪ್ರಗತಿಯಲ್ಲಿದೆ. ಏಪ್ರಿಲ್ 15ರೊಳಗೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ಕಾರ್ಯೋನ್ಮುಖವಾಗಿದೆ. ಇದರ ಜತೆಗೆ 5, 8ಮತ್ತು 9ನೇ ತರಗತಿಗಳ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಸಹ ತಾಲೂಕು ಹಂತದಲ್ಲಿ ನಡೆಯುತ್ತಿದೆ. ಇದರ ಫಲಿತಾಂಶ ಸಹ ಏ.10ಕ್ಕೆ ಪ್ರಕಟವಾಗುವ ಸಾಧ್ಯತೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ವ್ಯಕ್ತಪಡಿಸಿದೆ.