- ನ.26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘ ಗುರುವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ನ.26ರಂದು ಹಲವು ಖಾಸಗಿ ಬ್ಯಾಂಕ್ಗಳ ವ್ಯವಹಾರ ಸ್ಥಗಿತಗೊಳ್ಳಲಿದೆ.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ರಾಷ್ಟ್ರವ್ಯಾಪ್ತಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಬ್ಯಾಂಕ್ ನೌಕರರು ಸಹ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದು, ಗುರುವಾರ ಬ್ಯಾಂಕ್ಗಳು ಬಂದ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಮಜ್ದೂರ್ ಸಂಘ ಹೊರತುಪಡಿಸಿ 10 ಕೇಂದ್ರ ಕಾರ್ಮಿಕ ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದು, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ ಸಿಸ್ ಬ್ಯಾಂಕ್ ಬಂದ್ ಬೆಂಬಲಿಸಿಲ್ಲ.ಖಾಸಗಿ ವಲಯದ ಹಲವು ಬ್ಯಾಂಕ್, ವಿದೇಶಿ ಬ್ಯಾಂಕ್ಗಳ ಉದ್ಯೋಗಿಗಳು ಮುಷ್ಕರಕ್ಕೆ ಬೆಂಬಲ ನೀಡುವ ಸಾಧ್ಯತೆ ಇದೆ. ಸಾಮಾಜಿಕ ಜಾಲತಾಣದ ಮೂಲಕ ಹಲವಾರು ಬ್ಯಾಂಕ್ ಗುರುವಾರ ವ್ಯವಹಾರ ಇರುವುದಿಲ್ಲ ಎಂದು ಈಗಾಗಲೇ ಗ್ರಾಹಕರಿಗೆ ಮಾಹಿತಿ ನೀಡಿವೆ.
ಕಾರಣ ಏನು?: ಬ್ಯಾಂಕ್ಗಳ ಖಾಸಗೀಕರಣಕ್ಕೆ ವಿರೋಧ, ಹೊರಗುತ್ತಿಗೆ ವ್ಯವಸ್ಥೆಗೆ ವಿರೋಧ, ಬ್ಯಾಂಕ್ ಸಿಬ್ಬಂದಿ ಪರವಾಗಿ ಸೇವಾಶುಲ್ಕ ಕಡಿತ ಸೇರಿದಂತೆ ಬ್ಯಾಂಕಿಂಗ್ಗೆ ಸಂಬಂಧಪಟ್ಟ ಬೇಡಿಕೆಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.
ನೆಟ್ ಮತ್ತು ಮೊಬೈಲ್ ಬ್ಯಾಂಕಿಂಗ್ ಕಾರ್ಯ ನಿರತರವಾಗಿರಲಿದೆ. ಎಟಿಎಂನಿಂದ ಹಣವನ್ನು ಸಹ ವಿತ್ ಡ್ರಾ ಮಾಡಬಹುದಾಗಿದೆ. ಶುಕ್ರವಾರ ಬ್ಯಾಂಕ್ಗಳು ಎಂದಿನಂತೆ ಕಾರ್ಯ ನಿರ್ವಹಣೆ ಮಾಡಲಿವೆ. ಶನಿವಾರ ಮತ್ತು ಭಾನವಾರ ಪುನಃ ಬ್ಯಾಂಕ್ ರಜೆ ಇರಲಿದ್ದು, ಸೋಮವಾರದಿಂದ ವ್ಯವಹಾರಗಳು ಸಹಜ ಸ್ಥಿತಿಗೆ ಬರಲಿವೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.