ಮತದಾರರಿಗೆ ಗುಡ್ ನ್ಯೂಸ್…!
– ದೇಶದಲ್ಲಿ ಇದೇ ಮೊದಲ ಬಾರಿಗೆ ಕ್ಯೂಆರ್ ಕೋಡ್ ವೋಟರ್ ಸ್ಲಿಪ್
NAMMUR EXPRESS NEWS
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ದೇಶದಲ್ಲಿ ಇದೇ ಮೊದಲ ಬಾರಿಗೆ ಹೊಸ ಪ್ರಯೋಗ ಕೈಗೊಂಡಿದೆ. ಮತದಾರರಿಗೆ ಕ್ಯೂಆರ್ ಕೋಡ್ ಹೊಂದಿರುವ ವೋಟರ್ ಸ್ಲಿಪ್ ನೀಡಲಾಗುವುದು. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್ ಸ್ಲಿಪ್ ಗಳಲ್ಲಿ ಮತಗಟ್ಟೆಯ ಕ್ಯೂಆರ್ ಕೋಡ್ ಮುದ್ರಿಸಲಾಗಿದೆ.
ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಸೌಲಭ್ಯಗಳು ಕಲ್ಪಿಸಲಾಗುವುದು. ನಗರದ ನಿವಾಸಿಗಳು ಕ್ಯೂಆರ್ ಕೋಡ್ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.
ಮತದಾನದ ಕೇಂದ್ರ, ದಿನಾಂಕ, ಸಮಯ ಮೊದಲಾದ ಮಾಹಿತಿಯನ್ನು ಇದು ಒಳಗೊಂಡಿರುತ್ತದೆ. ಆದರೆ, ಇದರಲ್ಲಿ ಮತದಾರರ ಫೋಟೋ ಇರುವುದಿಲ್ಲ. ಮತದಾರರ ಮಾಹಿತಿ ಚೀಟಿಯನ್ನು ಮತದಾರರ ಗುರುತಿನ ಪುರಾವೆಯಾಗಿ ಪರಿಗಣಿಸುವುದಿಲ್ಲ. ಕೇಂದ್ರ ಚುನಾವಣಾ ಆಯೋಗ ವತಿಯಿಂದ ನಿಗದಿಪಡಿಸಲಾದ ಮತದಾರರ ಗುರುತಿನ ಚೀಟಿ ಅಥವಾ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡಿರುವ ಯಾವುದೇ ಇತರೆ ಗುರುತಿನ ಚೀಟಿಗಳನ್ನು ಗುರುತಿನ ಪುರಾವೆಯಾಗಿ ಬಳಸಬಹುದು.