- ಗುಜರಾತ್ ಹೈಕೋರ್ಟಿನಿಂದ ಮಹತ್ವದ ತೀರ್ಪು
ಅಹಮದಾಬಾದ್: ಕರೋನಾ ಕಾನೂನು ಉಲ್ಲಂಘಿಸಿದವರಿಗೆ ಗುಜರಾತ್ ಕೋರ್ಟ್ ಇದೀಗ ಅಚ್ಚರಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಕರೋನಾ ನಿಬರ್ಂಧಗಳನ್ನು ಉಲ್ಲಂಘಿಸಿದವರನ್ನು ಕೋವಿಡ್ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ಕಳುಹಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸೋಂಕು ಹರಡುವಿಕೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕರೋನಾ ಮಾರ್ಗಸೂಚಿ ಕಡೆಗಣಿಸಿದರೆ ಅದನ್ನು ಪುನರಾವರ್ತಿತ ಅಪರಾಧ ಎಂದು ಪರಿಗಣಿಸಲಾಗುತ್ತದೆ.”ನಾವು ಮಾಸ್ಕ್ ಧರಿಸದ ವ್ಯಕ್ತಿಗಳಿಂದ ದಂಡವನ್ನು ವಸೂಲಿ ಮಾಡುತ್ತೇವೆ. ಇದು ಅಷ್ಟಕ್ಕೆ ಮಾತ್ರ ಸೀಮಿತವಾಗಿರದೇ ತೀರಾ ಗಂಭೀರ ವಿಚಾರ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಗುಜರಾತ್ನಲ್ಲಿ ಕರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಮಾಸ್ಕ್ ಧರಿಸುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿಲ್ಲ ಎಂದು ವಕೀಲ ವಿಶಾಲ್ ಅಂತ್ವಾನಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಒಂದು ಬಾರಿ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಎಚ್ಚರಿಕೆಯನ್ನು ನೀಡಬೇಕು. ಅದೇ ತಪ್ಪನ್ನು ಪುನರಾವರ್ತಿಸಿದರೆ ಅಂಥವರನ್ನು ಕೊವಿಡ್-19 ಕೇಂದ್ರದಲ್ಲಿ ಕೆಲಸ ಮಾಡುವುದಕ್ಕೆ ಕಳುಹಿಸಬೇಕು. ಹಾಗಾದಲ್ಲಿ ಮತ್ತೊಮ್ಮೆ ಅಂಥವರು ಎಂದಿಗೂ ಮಾಸ್ಕ್ ಹಾಕಿಕೊಳ್ಳುವುದಕ್ಕೆ ಮರೆಯುವುದಿಲ್ಲ ಎಂದು ಕೋರ್ಟ್ ಹೇಳಿದೆ. ಗುಜರಾತಿನ ಪ್ರಮುಖ ನಗರಗಳಲ್ಲಿ ಮಾಸ್ಕ್ ಹಾಕದವರಿಗೆ 2000 ರೂಪಾಯಿ ದಂಡ ವಿಧಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಪ್ರಸ್ತುತ ರಾಜ್ಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ 1000 ರೂಪಾಯಿ ದಂಡ ಇದೆ.