- ಬಿಎಸ್ವೈ ಆಪ್ತ ಸಂತೋಷ್ ಆತ್ಮಹತ್ಯೆ ಯತ್ನ: ವೀಡಿಯೋ ಕಾರಣ ಎಂದ ಕಾಂಗ್ರೆಸ್
ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಆತ್ಮಹತ್ಯೆ ಯತ್ನ ಏಕೆ? ಏನು ಎಂಬ ಕುತೂಹಲ ಮೂಡಿರುವ ನಡುವೆ ಬಿಜೆಪಿ ನಾಯಕರ ವೀಡಿಯೋ ಈ ಘಟನೆಗೆ ಕಾರಣ ಎಂದು ಕಾಂಗ್ರೆಸ್ ಬಾಂಬ್ ಹಾಕಿದೆ.
ಸಂತೋಷ್ ಅವರು ತೀವ್ರ ರಾಜಕೀಯ ಒತ್ತಡದಲ್ಲಿದ್ದರು ಎಂದು ಕಾಂಗ್ರೆಸ್ ಆರೋಪ ಮಾಡಿದ್ದು ಈ ಬಗ್ಗೆ ವಿಸ್ತೃತ ತನಿಖೆಯಾಗಬೇಕೆಂದು ಒತ್ತಾಯಿಸಿದೆ. ಸಂತೋಷ್ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಸಿಎಂ ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಸಂತೋಷ್ ಅವರ ಆರೋಗ್ಯ ವಿಚಾರಿಸಿದ್ದಾರೆ. ವೀಡಿಯೋವೊಂದಕ್ಕೆ ಸಂಬಂಧಪಟ್ಟಂತೆ ಸಂತೋಷ್ ವಿರುದ್ಧ ದೂರು ನೀಡಲಾಗಿತ್ತು, ಈ ಹಿನ್ನೆಲೆಯಲ್ಲಿ ತೀವ್ರ ಒತ್ತಡದಿಂದ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ, ಅವರ ಆತ್ಮಹತ್ಯೆ ಯತ್ನದ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಪತ್ನಿ ಹೇಳಿದ್ದೇನು?: ಸಂತೋಷ್ ಅವರು ಕಳೆದ ಒಂದು ವರ್ಷದಿಂದ ತೀವ್ರ ರಾಜಕೀಯ ಒತ್ತಡದಲ್ಲಿದ್ದರು. ಪೆÇಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವೈಯಕ್ತಿಕವಾಗಿ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ಸಂತೋಷ್ ಪತ್ನಿ ಜಾಹ್ನವಿ ಹೇಳಿದ್ದಾರೆ. ಈ ಮೂಲಕ ವಯುಕ್ತಿಕ ಸಮಸ್ಯೆಯಿಂದ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.