- ಒಂದು ಕಡೆ ಚಳಿ, ಇತ್ತ ತಂಡಿ ತಂಡಿ
ಬೆಂಗಳೂರು: ನಿವಾರ್ ಚಂಡ ಮಾರುತದ ಎಫೆಕ್ಟ್ ರಾಜ್ಯದಲ್ಲಿ ಮಳೆ ಆತಂಕ ತಂದಿಟ್ಟಿದೆ. ದಿನೇ ದಿನೇ ತಂಪು ವಾತಾವರಣ ಹೆಚ್ಚಾಗುತ್ತಿದೆ. ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ.
ಕಳೆದ ಮೂರ್ನಾಲ್ಕು ದಿನಗಳಿಂದಲೂ ಚಂಡ ಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಹಗುರ ಮತ್ತು ಸಾಧಾರಣ ಪ್ರಮಾಣದ ಮಳೆಯಾಗಿದೆ.
ಬಂಗಾಳಕೊಲ್ಲಿಯಲ್ಲಿ ದುರ್ಬಲಗೊಂಡಿದ್ದ ನಿವಾರ್ ಚಂಡಮಾರುತ ಮತ್ತೆ ಬಲಗೊಳ್ಳುತ್ತಿದ್ದು, ಡಿ.1ರಿಂದ ಮತ್ತೆ ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಬಹುದು. ಅಡಿಕೆ, ರಾಗಿ, ಭತ್ತ, ಜೋಳ ಮತ್ತಿತರ ಬೆಳೆಗಳಿಗೆ ತೊಂದರೆಯಾಗಿದೆ. ಡಿಸೆಂಬರ್ ಮೊದಲೆರಡು ವಾರದಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗುವ ಸಾಧ್ಯತೆ ಇದೆ.