ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಂಮರಿಗೆ ಕೊಡುತ್ತೆ ಹೇಳಿಕೆ ವಿರುದ್ಧ ಆಕ್ರೋಶ
– ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ
– ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಕಿಮ್ಮನೆ ಅಗ್ರಹ
NAMMUR EXPRESS NEWS
ಬೆಂಗಳೂರು: ಕಾಂಗ್ರೆಸ್ ಗೆದ್ದರೆ ನಿಮ್ಮ ಮಂಗಳಸೂತ್ರ ಕಿತ್ತು ಮುಸ್ಲಿಂಮರಿಗೆ ಕೊಡುತ್ತೆ..! ಎಂಬ ಮೋದಿ ಹೇಳಿಕೆ ಹಲವೆಡೆ ಪ್ರಕಟವಾಗಿದ್ದು, ಈ ಹೇಳಿಕೆ ಸಮುದಾಯಗಳ ಮಧ್ಯೆ ದ್ವೇಷ, ಕೋಮುಭಾವನೆ ಕೆರಳಿಸುವ ಹೇಳಿಕೆಯಾಗಿದ್ದು, ರಾಜ್ಯ ದೇಶದ ಶಾಂತಿ ಸುವ್ಯವಸ್ಥೆ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ. ಇಂತಹ ಪ್ರಚೋದನಕಾರಿ ಹೇಳಿಕೆಯು ಪ್ರಧಾನಿ ಮೋದಿಯವರ ಹತಾಶೆ ಹಾಗೂ ಸೋಲಿನ ಭಯದಿಂದ ಕೂಡಿದ ಪ್ರತಿಕ್ರಿಯೆ ಆದರೂ ಸಹ ಇದು ಹಿಂದೂ ಮಹಿಳೆಯರ ಭಾವನಾತ್ಮಕ ವಿಚಾರಗಳನ್ನು ಕೆರಳಿಸುವ ಆ ಮೂಲಕ ಧರ್ಮ ಧರ್ಮಗಳ ಮಧ್ಯೆ ದ್ವೇಷ ಹರಡುವ ಹೇಳಿಕೆ ಆಗಿದ್ದು, ಆ ಮೂಲಕ ಮತ ಗಳಿಸುವ ವ್ಯವಸ್ಥಿತ ಒಳಸಂಚಾಗಿದೆ. ಕನ್ನಡ ಪ್ರಭ ಪತ್ರಿಕೆ ಸಂಪಾದಕ ಹಾಗೂ ಹೇಳಿಕೆ ನೀಡಿರುವ ಪ್ರಧಾನಿಮೋದಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಹಾಗೂ ದ್ವೇಷ ಹರಡುವ ಪಿತೂರಿ ಕುರಿತಂತೆ ತಕ್ಷಣ ಕ್ರಮ ಜರುಗಿಸಬೇಕಾಗಿ ಕಿಮ್ಮನೆ ರತ್ನಾಕರ್ ಸಹಾಯಕ ಚುನಾವಣಾಧಿಕಾರಿಗಳಿಗೆ ವಿನಂತಿಸಲಾಯಿತು.
ಈ ಹೇಳಿಕೆಯು ಸಂವಿಧಾನ ವಿರೋಧಿ ಹೇಳಿಕೆಯಾಗಿದ್ದು, ಪ್ರಧಾನಿಯವರ ಗೌಪ್ಯ ಪ್ರಮಾಣವಚನ ಮತ್ತು ಸಂಸತ್ ಸದಸ್ಯರ ಪ್ರಮಾಣವಚನಕ್ಕೆ ವಿರೋಧವಾಗಿರುತ್ತದೆ. ಭಾರತೀಯ ದಂಡ ಸಂಹಿತೆಯ ಅನ್ವಯ ಸದರಿ ಹೇಳಿಕೆ ಅಪರಾಧ ವಾಗಿರುವುದರಿಂದ ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲು ಸಹಾಯಕ ಚುನಾವಣಾಧಿಕಾರಿಗಳಿಗೆ ಈ ಮೂಲಕ ಆಗ್ರಹಿಸಲಾಯಿತು. ಕಿಮ್ಮನೆ ನೇತೃತ್ವದಲ್ಲಿ ಚುನಾವಣಾ ಅಧಿಕಾರಿಗಳಿಗೆ ಮನವಿ ನೀಡಲಾಯಿತು. ಹಾಗೂ ಪೊಲೀಸ್ ಇಲಾಖೆಗೂ ಮನವಿ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಗೀತಾ ರಮೇಶ್, ಕೆಸ್ತೂರು ಮಂಜುನಾಥ್, ಪಡುವಳ್ಳಿ ಹರ್ಷೇಂದ್ರ ಕುಮಾರ್, ಗೀತಾ ರಮೇಶ್, ಕೆಳಕೆರೆ ಪೂರ್ಣೇಶ್, ಅಶ್ವಲ್ ಗೌಡ, ಮಂಜುಳಾ ನಾಗೇಂದ್ರ ಮತ್ತು ಪ್ರಮುಖರು ಇದ್ದರು.