ಇಂದಿನಿಂದ ಮದ್ಯ ಸಿಗಲ್ಲ!
– ಏ.24 ರಿಂದ ಏ.26 ರವರೆಗೆ ಜಿಲ್ಲೆಯಲ್ಲಿ ಮದ್ಯಮುಕ್ತ ದಿನ
– 14 ಕ್ಷೇತ್ರಗಳಲ್ಲಿ 2 ದಿನ ಮದ್ಯ ಮಾರಾಟ ಬಂದ್
NAMMUR EXPRESS NEWS
ಬೆಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ. ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಫೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ
ಎಲ್ಲೆಲ್ಲಿ ಆದೇಶ? ಏಪ್ರಿಲ್ 26ಕ್ಕೆ ಎಲ್ಲೆಲ್ಲಿ ಚುನಾವಣೆ?
ಉಡುಪಿ ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ