- ಮಂಗಳೂರಲ್ಲಿ ಗೋಡೆ ಬರಹ
- ಮತ್ತೆ ಸುದ್ದಿಗೆ ಬಂದ ತೀರ್ಥಹಳ್ಳಿ!
ಮಂಗಳೂರು: ಇತ್ತೀಚಿಗೆ ಭಾರೀ ಸುದ್ದಿ ಮಾಡಿದ್ದ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಪೊಲೀಸರು ಯುವಕನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈತ ಮಲೆನಾಡಿನ ತೀರ್ಥಹಳ್ಳಿ ಮೂಲದವನು ಎನ್ನಲಾಗಿದೆ. ಆದರೆ ನಿಖರ ಮಾಹಿತಿ ಲಭ್ಯವಾಗಿಲ್ಲ. ವಿಚಾರಣಾ ದೃಷ್ಟಿಯಿಂದ ಮಾಹಿತಿ ಗೌಪ್ಯತೆ ಕಾಪಾಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಕೆಲ ದಿನಗಳ ಹಿಂದೆ ಗೋಡೆಗಳ ಮೇಲೆ ಲಷ್ಕರ್ ಈ ತೊಯ್ಬಾ ಉಗ್ರರ ಪರ ಬರಹಗಳನ್ನು ಬರೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ಅಗಾ ಎಂಬಾತನನ್ನು ಬಂಧಿಸಿದ್ದಾರೆ.
ಈತನ ಜೊತೆಗೆ ಬೈಕ್ ನಲ್ಲಿ ಬಂದು ಗೋಡೆ ಬರಹಕ್ಕೆ ಸಹಕರಿಸಿದ ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಪ್ರಕರಣ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಿದೆ. ಇನ್ನಾದರೂ ಪೊಲೀಸರು ಎಚ್ಚರ ವಹಿಸಬೇಕಿದೆ.