ಕರ್ನಾಟಕದಲ್ಲಿ ಮತದಾನ ಶುರುವಾಗಿದೆ!
– ಬೆಳಿಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಮತದಾನ
– ರಾಜ್ಯದ 14 ಲೋಕ ಸಭಾ ಕ್ಷೇತ್ರದಲ್ಲಿ ಮತದಾನ ಬಿರುಸು
– ಸಣ್ಣ ಪುಟ್ಟ ಗಲಾಟೆ, ಎಲ್ಲೆಲ್ಲಿ ಏನಾಗಿದೆ..?
– 247 ಅಭ್ಯರ್ಥಿಗಳ ಹಣೆಬರಹ ನಿರ್ಧಾರ ಮಾಡ್ತಾರೆ ಜನ
NAMMUR EXPRESS NEWS
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ 14 ಕ್ಷೇತ್ರದಲ್ಲಿ ಮೊದಲ ಹಂತದ ಲೋಕ ಸಭಾ ಚುನಾವಣೆ ಬೆಳಿಗ್ಗೆಯಿಂದಲೇ ಶುರುವಾಗಿದೆ. ಮೊದಲ ಹಂತದಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ. ಮತದಾರರು ಮುಂಜಾನೆಯಿಂದಲೇ ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ ಲೋಕಸಭಾ ಚುನಾವಣೆ ನಡೆಯುತ್ತಿದೆ.
ಸಣ್ಣಪುಟ್ಟ ಗಲಾಟೆ
ಮಂಗಳೂರಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ ಮಾಡಲು ಯತ್ನಿಸಿ ಅರೆಸ್ಟ್ ಆಗಿದ್ದಾನೆ.
ರಾಜ್ಯದ ಹಲವೆಡೆ ಇವಿಎಂ ಮತ ಯಂತ್ರಗಳು ಕೈಕೊಟ್ಟ ಘಟನೆಗಳು ವರದಿಯಾಗಿವೆ.