ಪ್ರಜ್ವಲ್ ಲೈಂಗಿಕ ದೌರ್ಜನ್ಯ: ಮತ್ತಷ್ಟು ಕೇಸ್?
– ಸಂತ್ರಸ್ತೆಯರು, ಮಾಹಿತಿದಾರರಿಗೆ ಸಹಾಯವಾಣಿ ಆರಂಭ
– ಬ್ಲೂಕಾರ್ನರ್ ನೋಟಿಸ್: ವಿದೇಶದಲ್ಲಿದ್ರೂ ಬಿಡಲ್ಲ
– ಪ್ರಜ್ವಲ್ ವಿರುದ್ಧ ಪೊರಕೆ ಸೇವೆ ಮಾಡಿದ ಮಹಿಳೆಯರು!
NAMMUR EXPRESS NEWS
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರ ನೆರವಿಗಾಗಿ ವಿಶೇಷ ತನಿಖಾ ತಂಡವು (ಎಸ್ಐಟಿ) ಸಹಾಯವಾಣಿ ಸ್ಥಾಪಿಸಿದೆ. ತನಿಖೆಯ ಸಂದರ್ಭದಲ್ಲಿ ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಸಂತ್ರಸ್ತರು ಇರುವುದು ತಿಳಿದು ಬಂದಿದ್ದು, ಸಂತ್ರಸ್ತರು ಹಾಗೂ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನು ನೆರವು ಹಾಗೂ ರಕ್ಷಣೆ ನೀಡಲು ಸಹಾಯವಾಣಿ ತೆರೆಯಲಾಗಿದ್ದು, 6360938947 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಎಸ್ಐಟಿ ತಿಳಿಸಿದೆ. ಹೆಸರು ಗೌಪ್ಯವಾಗಿಡುವುದು ಸಂತ್ರಸ್ತರು ಅಥವಾ ಬಾತ್ಮೀದಾರರ ಹೆಸರುಗಳನ್ನು ಗೌಪ್ಯವಾಗಿಡಲಾಗುವುದು ಎಂದು ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
– ಬ್ಲೂಕಾರ್ನರ್ ನೋಟಿಸ್
ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂಕಾರ್ನರ್ ನೋಟಿಸ್ ಹೊರಡಿಸಲಾಗಿದೆ. ಇಂಟರ್ಪೋಲ್ಗೆ ಮಾಹಿತಿ ನೀಡಿ ವಿದೇಶದಲ್ಲಿಎಲ್ಲೇ ಇದ್ದರೂ ಪತ್ತೆ ಹಚ್ಚುವ ಕಾರ್ಯಕ್ಕೆ ಎಸ್ಐಟಿ ಕ್ರಮ ವಹಿಸಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. . ನಿಯಮಾನುಸಾರ ಪ್ರಜ್ವಲ್ನನ್ನು ಕರೆತರುವ ನಿಟ್ಟಿನಲ್ಲಿಎಸ್ಐಟಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಅದಕ್ಕೆ ಬೇಕಾದ ಸಹಕಾರವನ್ನು ಸರಕಾರ ಕೊಡಲಿದೆ,’’ ಎಂದರು. ಸರಕಾರ ರಾಜಕೀಯ ದುರುದ್ದೇಶದಿಂದ ಕೆಲವು ಕ್ರಮ ಕೈಗೊಳ್ಳುತ್ತಿದೆ ಎಂಬ ಜೆಡಿಎಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ‘‘ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬೇಸರದಲ್ಲಿದ್ದು, ಸಹಜವಾಗಿ ಆ ರೀತಿ ಹೇಳಿರಬಹುದು. ಕಾನೂನಿನ ಪ್ರಕಾರ ಶಾಸಕ ಎಚ್.ಡಿ. ರೇವಣ್ಣ ಅವರ ಬಂಧನವಾಗಿದೆ. ಇಲ್ಲದಿದ್ದರೆ ಮುಂದೆ ಎಸ್ಐಟಿ ವಿರುದ್ಧವೂ ಆರೋಪ ಮಾಡುವ ಸಾಧ್ಯತೆ ಇದೆ,’’ ಎಂದು ತಿಳಿಸಿದರು.
– ಪ್ರಜ್ವಲ್ ವಿರುದ್ಧ ಪೊರಕೆ ಸೇವೆ ಮಾಡಿದ ಮಹಿಳೆಯರು!
ಮಂಡ್ಯದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಪೆನ್ಡ್ರೈವ್ ಪ್ರಕರಣ ಖಂಡಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ನಗರದಲ್ಲಿಪ್ರಜ್ವಲ್ ಪ್ರತಿಕೃತಿಗೆ ಪೊರಕೆ ಸೇವೆ ಮಾಡಿ ಪ್ರತಿಭಟನೆ ನಡೆಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿದ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆ ಯರು, ಶಾಸಕ ಎಚ್.ಡಿ.ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ನನ್ನು ಶೀಘ್ರ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಅಗ್ರಹಿಸಿದರು. ಇದೇ ವೇಳೆ ಪ್ರಜ್ವಲ್ ಪ್ರತಿಕೃತಿಯನ್ನು ಪೆಟ್ರೋಲ್ ಹಾಕಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.