ಪ್ರಜ್ವಲ್ ಪೆನ್ಡೈವ್ ಕೇಸ್ಗೆ ಟ್ವಿಸ್ಟ್..!
– ವಕೀಲ ದೇವರಾಜೇಗೌಡ ಪೊಲೀಸ್ ವಶಕ್ಕೆ: ಮಹಿಳೆಯಿಂದ ದೂರು ಬೆನ್ನಲ್ಲೇ ಖಡಕ್ ಕ್ರಮ
NAMMUR EXPRESS NEWS
ಚಿತ್ರದುರ್ಗ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಪೆನ್ಡೈವ್ ಪ್ರಕರಣದಲ್ಲಿ ಟ್ವಿಸ್ಟ್ ನೀಡಿದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರನ್ನು ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಗುಯಿಲಾಳ್ ಟೋಲ್ ಬಳಿ ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ಪೊಲೀಸರು, ನೀಡಿದ ಮಾಹಿತಿ ಮೇರೆಗೆ ಹಿರಿಯೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೇವರಾಜೇಗೌಡರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗಿದೆ. ನಮ್ಮ ನಿವೇಶನವೊಂದರ ಮಾರಾಟ ವಿಚಾರವಾಗಿ ವಕೀಲ ದೇವರಾಜೇಗೌಡರನ್ನು ಸಂಪರ್ಕ ಮಾಡಿದ್ದ ಸಂದರ್ಭದಲ್ಲಿ ಬೆದರಿಕೆ ಹಾಕಿ ನನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ವಿಡಿಯೊ ಕಾಲ್ ಮಾಡಿ ತಮ್ಮ ಅಂಗಾಂಗ ತೋರಿಸಿ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ ಬೆನ್ನಲ್ಲೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಬಂಧಿಸಿದ್ದು ಏಕೆ…?
ಪ್ರಜ್ವಲ್ರ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊಗಳ ಬಹಿರಂಗ ಮತ್ತು ಪೆನ್ಡೈವ್ ಹಂಚಿಕೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಮುಖಂಡರು ಹೈಗ್ರೌಂಡ್ ಪೊಲೀಸ್ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದರು. ದೇವರಾಜೇಗೌಡ ಬ್ಲ್ಯಾಕ್ ಮೇಲರ್ ಎಂದು ಕುಖ್ಯಾತಿಯಾಗಿದ್ದಾರೆ. ಪ್ರಜ್ವಲ್ರ ಲೈಂಗಿಕ ದೌರ್ಜನ್ಯದ ವಿಡಿಯೊಗಳ ಪೆನ್ ಡೈವ್ ಹಂಚಿಕೆ ವಿಚಾರವಾಗಿ ದೇವರಾಜೇಗೌಡ ಸರಕಾರದ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಕಾಂಗ್ರೆಸ್
ನಾಯಕರ ವಿರುದ್ಧ ಆರೋಪಿಸಿದ್ದ ಅವರ ಹೀನ ಕೃತ್ಯ ಬಹಿರಂಗವಾಗಿದ್ದು, ತಕ್ಷಣವೇ ಬಂಧಿಸಬೇಕು.
ದೇವರಾಜೇಗೌಡರ ನೈಜ ಚಿತ್ರಣ ಮತ್ತು ಅಪರಾಧ ಹಿನ್ನೆಲೆಯನ್ನು ಬಹಿರಂಗಪಡಿಸಬೇಕು,ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ನೇತೃತ್ವದ ನಿಯೋಗವು ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೋಹರ್, ಮಹಿಳೆಯರಿಗೆ ನ್ಯಾಯ ಕೊಡಿಸುತ್ತೇನೆ ಎಂದು ಹೇಳುವ ದೇವರಾಜೇ ಗೌಡರೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಕಾನೂನಾತ್ಮಕವಾಗಿ ಹೋರಾಟ ಮಾಡುವವರೇ ದೌರ್ಜನ್ಯ ಎಸಗಿ, ಎಸ್ಐಟಿ ಸರಿಯಾಗಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯು ಹಾಸನದಲ್ಲಿ ದೂರು ದಾಖಲಿಸಿದ ನಂತರ ದೇವರಾಜೇಗೌಡ ನಾಪತ್ತೆಯಾಗಿದ್ದರು. ಈ ಪ್ರಕರಣದಲ್ಲಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.