ಹೊರ ಗುತ್ತಿಗೆ ನೇಮಕಾತಿಯಲ್ಲೂ ಮಹಿಳಾ ಮೀಸಲಾತಿ!
– ಶೇ.33ರಷ್ಟು ಮಹಿಳೆಯರನ್ನು ನೇಮಕಕ್ಕೆ ಸೂಚನೆ
– ಸರ್ಕಾರದ ಮಹತ್ವದ ಆದೇಶ: ಮಹಿಳೆಯರಿಗೆ ಗುಡ್ ನ್ಯೂಸ್
NAMMUR EXPRESS NEWS
ಬೆಂಗಳೂರು : ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ. ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕಿದೆ. ಈ ಮೂಲಕ ಹೊರಗುತ್ತಿಗೆಯಲ್ಲೂ ಮೀಸಲಾತಿ ಕಡ್ಡಾಯಗೊಳಿಸಿ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.