- ರಾಜಕೀಯದಲ್ಲೇ ದುರಂತ ಘಟನೆ
- ಪರಿಷತ್ ಗಲಾಟೆಯಿಂದ ನೊಂದು ಸಾವು?
ಚಿಕ್ಕಮಗಳೂರು: ರೈಲಿಗೆ ತಲೆಕೊಟ್ಟು ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶವ ಪರೀಕ್ಷೆಗೆ ಬಂದಿದೆ.
ಸಖರಾಯಪಟ್ಟಣದಲ್ಲಿ ಸಂಜೆ 5 ಗಂಟೆಗೆ ಶವ ಸಂಸ್ಕಾರ ನಡೆಯಲಿದೆ ಎಂದು ತಿಳಿದು ಬಂದಿದೆ. 2 ಗಂಟೆ ವೇಳೆಗೆ ಚಿಕ್ಕಮಗಳೂರಿಗೆ ಶವ ಬರಲಿದೆ.
ಇತ್ತೀಚೆಗೆ ವಿಧಾನ ಪರಿಷತ್ನಲ್ಲಿ ನಡೆದ ಘಟನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಡೆತ್ನೋಟ್ ಈ ಬಗ್ಗೆ ತಿಳಿದು ಬಂದಿದೆ. ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ. 11:30ರ ವೇಳೆಗೆ ಶವ ಪತ್ತೆಯಾಗಿದೆ.
ಏನಾಗಿತ್ತು? : ರಾತ್ರಿ 10 ಗಂಟೆಗೆ ಒಬ್ಬರೇ ಮನೆಯಿಂದ ಕಾರಿನಲ್ಲಿ ತೆರಳಿದ್ದ ಅವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು.
ಘಟನಾಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
1955 ಡಿಸೆಂಬರ್ 16 ರಂದು ಚಿಕ್ಕಮಗಳೂರು ತಾಲೂಕಿನ ಸರಪನಹಳ್ಳಿಯಲ್ಲಿ ಎಸ್.ಆರ್. ಲಕ್ಷ್ಮಯ್ಯ, ಕೃಷ್ಣಮ್ಮ ದಂಪತಿ ಮಗನಾಗಿ ಜನಿಸಿದ್ದು, ಮಮತಾ ಅವರೊಂದಿಗೆ ಮದುವೆಯಾಗಿದ್ದರು. ಅವರಿಗೆ ಮಗ , ಮಗಳು ಇದ್ದಾರೆ. ಜೆಡಿಎಸ್ ಪಕ್ಷದಿಂದ ಕಡೂರು ಕ್ಷೇತ್ರದ ಶಾಸಕರಾಗಿದ್ದರು. ವಿಧಾನ ಪರಿಷತ್ ಸದಸ್ಯರಾಗಿ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರ ಸಹೋದರ ಭೋಜೇಗೌಡ ಕೂಡ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ.
ಡೆತ್ನೋಟ್!:ಇತ್ತೀಚೆಗೆ ವಿಧಾನ ಪರಿಷತ್ನಲ್ಲಿ ನಡೆದ ಗಲಾಟೆ ಘಟನೆ ಧರ್ಮೇಗೌಡ ಅವರ ಮನಸಿಗೆ ಘಾಸಿ ತಂದಿತ್ತು. ಸಭಾಪತಿ ಪೀಠದ ಮೇಲೆ ಕುಳಿತಿದ್ದ ಅವರನ್ನ ಕಾಂಗ್ರೆಸ್ ಸದಸ್ಯರು ಎಳೆದಾಡಿದ್ದರು. ಇದು ಅವರಿಗೆ ಬಹಳ ನೋವು ತಂದಿತ್ತು. ಮಾಧ್ಯಮಗಳ ಮುಂದೆ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಹೋದರೂ ತಮ್ಮ ಆಪ್ತವಲಯದಲ್ಲಿ ಸಾಕಷ್ಟು ನೋವು ತೋಡಿಕೊಂಡಿದ್ದರು. ಡೆತ್ನೋಟ್ನಲ್ಲಿ ಅವರು ಈ ವಿಚಾರವನ್ನು ಪ್ರಸ್ತಾಪ ಮಾಡಿ, ಘಟನೆಯಿಂದ ಬಹಳ ನೋವಾಗಿತ್ತು ಎಂದಿದ್ಧಾರೆ. ಡೆತ್ ನೋಟ್ನಲ್ಲಿ ತಮ್ಮ ಪತ್ನಿ, ಮಗ ಮತ್ತು ಮಗಳ ಕ್ಷಮೆ ಕೂಡ ಅವರು ಯಾಚಿಸಿದ್ದಾರೆ.
ದೇವೇಗೌಡ ಅವರು ಈ ಸಾವಿಗೆ ಕಣ್ಣೀರು ಹಾಕಿದ್ದಾರೆ. ಸಿಎಂ ಸೇರಿದಂತೆ ಎಲ್ಲಾ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇತ್ತೀಚಿನ ಘಟನೆಗಳು ರಾಜಕೀಯ ಅಸಹ್ಯ ಮೂಡಿಸಿದೆ. ಕೌಟುಂಬಿಕ ಕಾರಣವೇ ಎಂಬ ಅನುಮಾನ ಮೂಡಿದೆ.