- ಗ್ರಾಮ ಪಂಚಾಯತ್ ಚುನಾವಣೆಯ ಕ್ಲೈಮಾಕ್ಸ್
- ತೀರ್ಥಹಳ್ಳಿ ಸರ್ಕಾರಿ ಪಿಯು ಕಾಲೇಜಲ್ಲಿ ಮತ ಎಣಿಕೆ
ತೀರ್ಥಹಳ್ಳಿ: ಗ್ರಾಮ ಪಂಚಾಯತ್ ಚುನಾವಣೆ ಕ್ಲೈಮಾಕ್ಸ್ ಹಂತಕ್ಕೆ ಬಂದಿದೆ. ಬುಧವಾರ ಬೆಳಗ್ಗೆಯಿಂದಲೇ ಫಲಿತಾಂಶ ಪ್ರಕಟವಾಗಲಿದೆ.
ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯತ್ಗಳ 322 ಮಂದಿಯ ಅಭ್ಯರ್ಥಿಗಳ ಭವಿಷ್ಯ ಬುಧವಾರ ನಿರ್ಧಾರವಾಗಲಿದೆ. 14 ಮಂದಿ ಈಗಾಗಲೇ ಅವಿರೋಧ ಆಯ್ಕೆಯಾಗಿದ್ದಾರೆ.
ಪೊಲೀಸರು ಸೇರಿ 500ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಈ ಮತ ಎಣಿಕೆ ಕಾರ್ಯದಲ್ಲಿ ತೊಡಗಲಿದ್ದಾರೆ. ಬಹುತೇಕ ಸಂಜೆ ವೇಳೆಗೆ ಫಲಿತಾಂಶ ಹೊರಬೀಳಲಿದೆ. ಸುಮಾರು 57 ರೌಂಡ್ಸ್ನ ಎಣಿಕೆ ನಡೆಯಲಿದೆ.
ಮತ ಎಣಿಕೆ ಕೇಂದ್ರಕ್ಕೆ ಕ್ಯಾಂಡಿಟೇಡ್ ಅಥವಾ ಅವರ ಪರ ಏಜೆಂಟ್ಗೆ ಅವಕಾಶ ನೀಡಲಾಗಿದೆ ಎನ್ನಲಾಗಿದೆ. ಸಂಜೆ 5ರೊಳಗೆ ಬಹುತೇಕ ಮತ ಎಣಿಕೆ ಮುಕ್ತಾಯವಾಗಲಿದೆ. ಈಗಾಗಲೇ ಪ್ರತಿ ಹಳ್ಳಿಯಲ್ಲೂ ಅಭ್ಯರ್ಥಿಗಳು ಮತ ಎಣಿಕೆಯನ್ನು ಕುತೂಹಲದಿಂದ ಕಾಯುತ್ತಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವುದರಿಂದ ಈ ಎಣಿಕೆ ಮಹತ್ವ ಪಡೆದಿದೆ. ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಜೆಡಿಎಸ್ ನಾಯಕ ಡಾ.ಆರ್.ಎಂ.ಮಂಜುನಾಥ ಗೌಡ ಸೇರಿದಂತೆ ಬಹುತೇಕ ನಾಯಕರಿಗೆ ಇದು ಪ್ರತಿಷ್ಠೆಯಾಗಿದೆ.
25ಕ್ಕೂ ಹೆಚ್ಚು ಪಂಚಾಯಿತಿಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಿಮ್ಮನೆ ಕೂಡಾ ಕಾಂಗ್ರೆಸ್ ಮುನ್ನಡೆ ಸಾಧಿಸಲಿದೆ ಎಂಬ ನಂಬಿಕೆಯಲ್ಲಿದ್ದಾರೆ .ಜೆಡಿಎಸ್ ಕೂಡ ಹುಮ್ಮಸ್ಸಿನಲ್ಲಿದೆ. ಗ್ರಾ.ಪಂ ಚುನಾವಣೆಯ ಫಲಿತಾಂಶಗಳು ಸದ್ಯದಲ್ಲೇ ಎದುರಾಗುತ್ತಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯತ್ ಚುನಾವಣೆಗಳ ಮೇಲೆ ಪರಿಣಾಮ ಬೀರಲಿದೆ.
ಡಿಸೆಂಬರ್ 22ಕ್ಕೆ ಎಲ್ಲಾ 38 ಗ್ರಾಮ ಪಂಚಾಯಿತಿಗಳಿಗೆ ಮತದಾನ ನಡೆದಿದ್ದು ಬುಧವಾರ ತೀರ್ಥಹಳ್ಳಿ ಸರ್ಕಾರಿ ಡಾ.ಅನಂತಮೂರ್ತಿ ಪ್ರೌಢಶಾಲೆಯಲ್ಲಿ ಎಣಿಕೆ ನಡೆಯಲಿದೆ. ಮತ ಪತ್ರಗಳನ್ನು ಭದ್ರವಾಗಿಡಲಾಗಿದ್ದು, ಅಲ್ಲಿಯೇ ಎಣಿಕೆ- ಫಲಿತಾಂಶ ಪ್ರಕಟವಾಗುತ್ತದೆ.
ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ತಾಲ್ಲೂಕು ಆಡಳಿತ ಎಲ್ಲಾ ಸಿದ್ಧತೆ ನಡೆಸಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಒಟ್ಟು 57 ಟೇಬಲ್ ನಲ್ಲಿ ಮತ ಎಣಿಕೆಯಾಗುತ್ತದೆ. ಪ್ರತಿ ಟೇಬಲ್ಗೆ 3 ಜನರಂತೆ ಒಟ್ಟು 210 ಸಿಬ್ಬಂದಿಗಳು ಎಣಿಕೆ ಕಾರ್ಯದಲ್ಲಿ ಪಾಲ್ಗೊಳ್ಳುವರು. ಬಹುತೇಕ ಸಂಜೆ 5 ರೊಳಗೆ ಎಲ್ಲಾ 38 ಗ್ರಾಮ ಪಂಚಾಯಿತಿಗಳ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ. ನಮ್ಮೂರ್ ಎಕ್ಸ್ಪ್ರೆಸ್ ಮಾಧ್ಯಮ ಫಲಿತಾಂಶವನ್ನು ತನ್ನ ಫೇಸ್ಬುಕ್ ಪೇಜ್ನಲ್ಲಿ ಪ್ರಕಟ ಮಾಡಲಿದೆ.
www.nammurexpress.in