ಬೆಳ್ತಂಗಡಿ: ಗಣಿಗಾರಿಕೆ: ಶಾಸಕ ಹರೀಶ್ ಪೂಂಜಾ ಸೇರಿ ಆರೋಪಿಗಳ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ಗೆ ಆರೋಪ ಪಟ್ಟಿ ಸಲ್ಲಿಕೆ!
– ಪುತ್ತೂರಿನಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣು!
NAMMUR EXPRESS NEWS
ಬೆಳ್ತಂಗಡಿಯಲ್ಲಿ ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರ ಬಂಧನ ಹಾಗೂ ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣಗಳಿಗೆ ಸಂಬಂಧಸಿದಂತೆ ಎಸ್ಪಿ ರಿಷ್ಯಂತ್ ಸಿಬಿ ಅವರಿಂದ ನಿಯೋಜಿಸಲ್ಪಟ್ಟಿರುವ ವಿಶೇಷ ತನಿಖಾ ತಂಡವು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯಕ್ಕೆ ಆರೋಪ ಪಟ್ಟಿಯೊಂದನ್ನು ಸಲ್ಲಿಕೆ ಮಾಡಿರುವುದಾಗಿ ವರದಿಯಾಗಿದೆ. ಪುತ್ತೂರು ನಗರ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಜಿಜೆ ಅವರ ನೇತೃತ್ವದ ತಂಡವು ಈ ಪ್ರಕರಣದಲ್ಲಿ ಒಂದು ಹಂತದ ತನಿಖೆಯನ್ನು ನಡೆಸಿ ಸಮಗ್ರ ವರದಿಯನ್ನು ಕೋರ್ಟ್ಗೆ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕ ಕಾಯ್ದೆಯಡಿ ಬಿಜೆಪಿ ಯುವ ಮೋರ್ಚಾದ ಬೆಳ್ತಂಡಿ ಅಧ್ಯಕ್ಷ ಶಶಿರಾಜ್ ಶೆಟ್ಟಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಈ ಬಂಧನವನ್ನು ಖಂಡಿಸಿ ಶಾಸಕ ಹರೀಶ್ ಪೂಂಜಾ ಅವರು ಕೂಡ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ ಪ್ರತಿಭಟನೆ ಮಾಡುವ ವೇಳೆ ಪೊಲೀಸರ ವಿರುದ್ಧ ಅವಾಚ್ಯ ಶಬ್ದ ಬಳಸಿ ವಿವಾದಾತ್ಮಕ ಹೇಳಿಕೆ ನೀಡಿರುವುದರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲಿ ಶಾಸಕರ ಬಂಧನ ವಿಚಾರ ಭಾರೀ ಸುದ್ದಿಯಾಗಿದ್ದು, ಬಳಿಕ ಸ್ಟೇಷನ್ಗೆ ಕರೆಸಿ ಬೇಲ್ ಕೂಡ ನೀಡಲಾಗಿತ್ತು. ಇದೀಗ ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಪುತ್ತೂರಿನಲ್ಲಿ ಮಹಿಳೆ ಆತ್ಮಹತ್ಯೆಗೆ ಶರಣು!
ಪುತ್ತೂರಿನ ಮರೀಲ್ ಎಂಬಲ್ಲಿನ ಕಾಡುಮನೆ ನಿವಾಸಿ, ಆಟೋ ರಿಕ್ಷಾ ಚಾಲಕರ ಪತ್ನಿ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತರನ್ನು ಮನೋಜ್ ಅವರ ಸಂಧ್ಯಾ ಸಾವಿಗೆ ಶರಣಾಗಿರುವ ಮಹಿಳೆ. ಮನೋಜ್ ಅವರು ರಾತ್ರಿವೇಳೆ ರಿಕ್ಷಾದಲ್ಲಿ ಬಾಡಿಗೆ ಮಾಡುತ್ತಿದ್ದು, ಬೆಳಗ್ಗೆ ಮನೆಗೆ ಬರುತ್ತಿದ್ದರು. ಅದೇರೀತಿ ಮೇ 27ರ ರಾತ್ರಿ ಹೋಗಿದ್ದು ಮರುದಿನ ಬೆಳಗ್ಗೆ ಬಂದಿದ್ದಾರೆ. ಅಷ್ಟೊತ್ತಿಗೆ ಪತ್ನಿ ಸಂಧ್ಯಾ ಮನೆಯ ಹಾಲ್ನಲ್ಲಿ ಕಿಟಕಿಗೆ ನೇಣು ಹಾಕಿಕೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಷ್ಟರಲ್ಲಿ ಮೃತಪಟ್ಟಿದ್ದರು. ಮೃತರು 13 ವರ್ಷದ ಪುತ್ರನನ್ನು ಅಗಲಿದ್ದಾರೆ. ಸಂಧ್ಯಾ ಅವರ ಸಾವಿಗೆ ಕಾರಣ ಇನ್ನೂ ಗೊತ್ತಾಗಿಲ್ಲ.