ಚುನಾವಣೆ, ಫಲಿತಾಂಶ: ಎಣ್ಣೆ ಸಿಗಲ್ಲ ಗುರೂ..!
– ಜೂನ್ 1ರಿಂದ ಮದ್ಯ ಸಿಗಲ್ಲ: ಜೂ 4ರಿಂದ 5ರಂದು ನಿಷೇಧಾಜ್ಞೆ ಜಾರಿ
– ಏನಿದು ನಿಯಮ? ಎಲ್ಲೆಲ್ಲಿ ಜಾರಿ?
NAMMUR EXPRESS NEWS
ರಾಜ್ಯ ವಿಧಾನ ಪರಿಷತ್ ಚುನಾವಣೆ ಮತದಾನದ ಹಿನ್ನಲೆ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಜೂನ್ 1ರ ಸಂಜೆ 4 ಗಂಟೆಯಿಂದ ಜೂನ್ 3ರ ಸಂಜೆ 4 ಗಂಟೆವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಜೂನ್ 3ರ ಸಂಜೆ 4ರಿಂದ ರಾತ್ರಿವರೆಗೆ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಮತ್ತೆ 4ನೇ ತಾರೀಖು ಬಂದ್ : ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನಲೆ ಜೂನ್ 4ರ ಬೆಳಿಗ್ಗೆಯಿಂದ ರಾತ್ರಿ 12ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಜೂ 4ರಿಂದ 5ರಂದು ನಿಷೇಧಾಜ್ಞೆ ಜಾರಿ
ಸಾರ್ವತ್ರಿಕ ಲೋಕಸಭೆ ಚುನಾವಣೆ-2024ರ ಹಿನ್ನೆಲೆಯಲ್ಲಿ ಮತ ಎಣಿಕೆಯು ನಡೆಯಲಿದ್ದು, ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂ-04 ರ ಬೆಳಗ್ಗೆ 6 ರಿಂದ ಜೂ-05 ರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪುಗಾರಿಕೆ ಮಾಡುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದವರು ತಿಳಿಸಿದ್ದಾರೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ.
ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ.ಯಾವುದೇ ವಿನಾಶ ಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತು ಗಳನ್ನು ಬಳಸುವಂತಿಲ್ಲ.