-ಬಿಸಿಸಿಐ ಅಧ್ಯಕ್ಷರಿಗೆ ಎದೆನೋವು
-ತುರ್ತು ವಿಭಾಗದಲ್ಲಿ ಚಿಕಿತ್ಸೆ
ಕೋಲ್ಕತ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿಗೆ ಶನಿವಾರ ಎದೆನೋವು ಕಾಣಿಸಿಕೊಂಡಿದೆ. ದೈಹಿಕ ಕಸರತ್ತಿನಲ್ಲಿ ತೊಡಗಿದ್ದ ವೇಳೆ ಗಂಗೂಲಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಗಂಗೂಲಿಯವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ, 48 ವರ್ಷದ ಗಂಗೂಲಿ ಆರೋಗ್ಯ ಸ್ಥಿರವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಯ ತುರ್ತುವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಗಂಗೂಲಿ ಕ್ಷೇಮವಾಗಿದ್ದು, ಹೃದಯಾಘಾತದಿಂದ ಅಥವಾ ಇನ್ನಿತರ ಸಮಸ್ಯೆಯಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿರುವ ಕುರಿತು ವಿವಿಧ ಪರೀಕ್ಷೆಗಳ ಮೂಲಕ ತಿಳಿಯಲಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಮತ್ತೊಂದು ವರದಿಯ ಪ್ರಕಾರ ಗಂಗೂಲಿ ಹೃದಯಾಘಾತಕ್ಕೆ ಒಳಗಾಗಿದ್ದು, ಶನಿವಾರ ಸಂಜೆ ಆಂಜಿಯೋಪ್ಲಾಸ್ಟಿಗೆ ಒಳಗಾಗಲಿದ್ದಾರೆ ಎಂದು ತಿಳಿದುಬಂದಿದೆ. ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ.