- ಬಿಜೆಪಿ ಕಾರ್ಯಕಾರಣಿಯಲ್ಲಿ ಗೋ ಪೂಜೆ
- ಬಿಜೆಪಿ ನಾಯಕರಿಗೆ ಸಿಎಂ ಧೈರ್ಯದ ಟಾನಿಕ್
ಶಿವಮೊಗ್ಗ: ಬಿಜೆಪಿ ಕಾರ್ಯಕಾರಣಿ ವಿಶೇಷ ಸಭೆಯಲ್ಲಿ ಸಿಎಂ ಮತ್ತು ಬಿಜೆಪಿ ನಾಯಕರು ಗೋ ಪೂಜೆ ಮಾಡುವ ಮೂಲಕ ಹೊಸ ಪದ್ಧತಿಗೆ ನಾಂದಿ ಹಾಡಿದರು.
ಸಿಎಂ ಯಡಿಯೂರಪ್ಪ ಮಾತನಾಡಿ, ಬಿಜೆಪಿ ಹಲವು ನಾಯಕರ ಪರಿಶ್ರಮದಿಂದ ಇಂದು ಅಧಿಕಾರಕ್ಕೆ ಬಂದಿದೆ. ನಾವು ಗುರಿ ಇಟ್ಟುಕೊಂಡು ಸಾಧನೆ ಮಾಡಬೇಕು. ಗ್ರಾಮ ಪಂಚಾಯತಿ ಚುನಾವಣೆ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಹುಮ್ಮಸ್ಸು, ತೃಪ್ತಿ ತಂದಿದೆ. ನಮ್ಮ ಗುರಿ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲೂ ಗೆಲ್ಲಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನವನ್ನು ಗೆಲ್ಲುವುದು ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 43 ಸಾವಿರ ಜನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಆಯ್ಕೆಯಾಗಿದ್ದಾರೆ. ಅದರಲ್ಲಿ 3500ಕ್ಕೂ ಹೆಚ್ಚು ಜನರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ. ನಮ್ಮ ಮುಂದಿನ ಗುರಿ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವುದು ಎಂದಿದ್ದಾರೆ.
ಸಿಎಂ ಕುರ್ಚಿ ಖಾಲಿ ಇಲ್ಲ: ರಾಜ್ಯದಲ್ಲಿ ಸಿಎಂ ಕುರ್ಚಿ ಅಲುಗಾಡುತ್ತಿಲ್ಲ, ಹಾಗೇಯೇ ಖಾಲಿಯೂ ಇಲ್ಲ. ಮುಂದಿನ ಎರಡೂವರೆ ವರ್ಷ ಸಿಎಂ ಆಗಿ ಯಡಿಯೂರಪ್ಪ ಇರುತ್ತಾರೆ. ಆದರೆ ವಿರೋಧ ಪಕ್ಷದ ನಾಯಕನ ಸೀಟಿಗಾಗಿ ಟವಲ್ ಹಾಕುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಟಿಲ ಹರಿಹಾಯ್ದರು.
ಎಸ್ಡಿಪಿಐ ರಾಷ್ಟ್ರದ್ರೋಹಿ ಘೋಷಣೆ ಹಾಕಿದೆ. ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.ಎಲ್ಲಾ ಸುದ್ದಿಗಳನ್ನು ನಮ್ಮೂರ್ ಎಕ್ಸ್ಪ್ರೆಸ್ನಲ್ಲಿ ಮಾತ್ರ ವೀಕ್ಷಿಸಿ.