ರಾಜ್ಯದಲ್ಲಿ ಮೈತ್ರಿ ಪಾಸ್: ಜಿಪಂ, ತಾಪಂ ಅಲ್ಲೂ ದೋಸ್ತಿ?
– ಲೋಕ ಸಭೆಯಲ್ಲಿ ಮೈತ್ರಿ ಇಲ್ದಿದ್ರೆ ಕಷ್ಟ ಕಷ್ಟ
– ವಿಧಾನ ಪರಿಷತ್ ಚುನಾವಣೆಯಲ್ಲೂ ಮೈತ್ರಿಗೆ ಗೆಲುವು
– ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏನಾಗುತ್ತೆ..?
NAMMUR EXPRESS NEWS
ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಪಾಸ್ ಆಗಿದೆ. ಒಂದು ವೇಳೆ ಲೋಕ ಸಭೆ ಚುನಾವಣೆಯಲ್ಲಿ ಮೈತ್ರಿ ಇಲ್ಲದಿದ್ದರೆ ಇನ್ನಷ್ಟು ಸ್ಥಾನ ಕಳೆದುಕೊಳ್ಳುವ ಆತಂಕ ಇತ್ತು.
ಲೋಕ ಸಭೆಯಲ್ಲಿ 17 ಸ್ಥಾನ ಬಿಜೆಪಿ, 2 ಸ್ಥಾನ ಜೆಡಿಎಸ್ ಗೆದ್ದಿದೆ. ಕಾಂಗ್ರೆಸ್ 9 ಸ್ಥಾನ ಗೆದ್ದಿದೆ. ಒಂದು ವೇಳೆ ಮೈತ್ರಿ ಇಲ್ಲದಿದ್ದರೆ ಭಾರೀ ಕಷ್ಟ ಆಗುತ್ತಿತ್ತು ಎಂಬ ಚರ್ಚೆ ಜೋರಾಗಿದೆ.
ಇನ್ನು ರಾಜ್ಯದ ವಿಧಾನ ಪರಿಷತ್ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಮತ ಎಣಿಕೆ ಪೂರ್ಣಗೊಂಡಿದ್ದು, ಐದು ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದೆ. ಕಾಂಗ್ರೆಸ್, ಜೆಡಿಎಸ್ ತಲಾ ಎರಡು ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ಒಂದು ಕ್ಷೇತ್ರದಲ್ಲಿ ಜಯಗಳಿಸಿವೆ.
ಲೋಕಸಭಾ ಚುನಾವಣೆಯಂತೆ ವಿಧಾನ ಪರಿಷತ್ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಜೆಡಿಎಸ್ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿಜೆಪಿ ಎರಡು ಕ್ಷೇತ್ರ ಸೋತಿದ್ದು, ಒಂದು ಕ್ಷೇತ್ರದಲ್ಲಿ ಜಯಗಳಿಸಿದೆ. ಆದರೆ, ಆಡಳಿತಾರೂಢ ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿ ಮೂರು ಕ್ಷೇತ್ರಗಳಲ್ಲಿ ಸೋತು ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದೆ.
ಸ್ಥಳೀಯ ಚುನಾವಣೆಗೂ ಮೈತ್ರಿ?!
ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆಯಾ ಎಂಬ ಚರ್ಚೆ ಶುರುವಾಗಿದೆ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ.